KSRTC Accident: ಕೆಎಸ್‌ಆರ್‌ಟಿಸಿ ಬಸ್-ಆಟೋ ನಡುವೆ ಭೀಕರ ಅಪಘಾತ: ಮಗು ಸೇರಿ 6 ಜನ ಸಾವು
KSRTC-Auto Accident: ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿವೆ. ಈ ನಡುವೆಯೇ ಇದೀಗ ಇಂದು (ಆಗಸ್ಟ್ 28) ಕೆಎಸ್‌ಆರ್‌ಟಿಸಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ತಲಪಾಡಿ ಬಳಿ ನಡೆದಿದೆ. ಘಟನೆಯಲ್ಲಿ ಒಂದು ಮಗು ಸೇರಿ 6 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಒಂದು ಸೇರಿದಂತೆ ಮೂವರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ಇನ್ನು 7 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಮಂಗಳೂರಿನಿಂದ ಕಾಸರಗೋಡಿಗೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

ಅಜ್ಜಿನಡ್ಕ ನಿವಾಸಿ ಖತೀಜ (60), ಅವರ ತಂಗಿ ನಫೀಸಾ (52), ಖತೀಜ ಅವರ ಅಣ್ಣನ ಮಗಳು ಹಸೀನ(13), ತಂಗಿಯ ಮಗಳು ಆಯಿಷ ಫಿದಾ (19), ಖತೀಜ ಅವರ ಸಂಬಂಧಿ ಹವ್ವಮ್ಮ (70) ಮತ್ತು ಅಜ್ಜಿನಡ್ಕದ ರಿಕ್ಷಾ ಚಾಲಕ ಹೈದರ್ ಆಲಿ (47) ಮೃತಪಟ್ಟಿರುವವರು ಎಂದು ಗುರುತಿಸಲಾಗಿದೆ.
ಬಾರೀ ಮಳೆ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಖತೀಜ ಅವರು ಇಬ್ಬರು ಮಕ್ಕಳು ಮತ್ತು ಇತರ ಸಂಬಂಧಿಕ ಮಹಿಳೆಯರ ಜೊತೆಗೆ ಆಟೋ ರಿಕ್ಷಾದಲ್ಲಿ ಮಂಜೇಶ್ವರದ ಸಂಬಂಧಿಕರ ಮನೆಗೆ ಹೊರಟಿದ್ದರು. ಈ ವೇಳೆ, ಕಾಸರಗೋಡು ಕಡೆಯಿಂದ ಬಂದ ಸಾರಿಗೆ ಬಸ್ ಆಟೋಗೆ ಡಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಆಟೋ ಪಲ್ಟಿಯಾಗಿ 6 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications