ಪ್ರಯಾಣಿಕನನ್ನು ಕಾಲಿಂದ ಒದ್ದು ರಸ್ತೆಗೆ ತಳ್ಳಿದ ಕೆಎಸ್‌ಆರ್‌ಟಿಸಿ ಕಂಡಕ್ಟರ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನು ಪ್ರಯಾಣಿಕನೊಂದಿಗೆ ಅಮಾನವೀಯ ನಡೆದುಕೊಂಡ ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಬಸ್‌ ಕಂಡಕ್ಟರ್ ರಸ್ತೆಗೆ ತಳ್ಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಂಡಕ್ಟರ್‌ ವರ್ತನೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಪ್ರಯಾಣಿಕ ಏನೋ ತಪ್ಪು ಮಾಡಿರಬೇಕು ಎನ್ನುವ ಅನುಮಾನ ವ್ಯಕ್ತಪಡಿಸಿದ್ದಾರೆ.

Mangaluru: KSRTC conductor kicked the passenger and pushed him on the road

ವೈರಲ್ ವಿಡಿಯೋದಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಪ್ರಯಾಣಿಕನನ್ನು ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದಿದ್ದಾನೆ. ಈ ಮೂಲಕ ಬಸ್ ಹತ್ತದಂತೆ ತಡೆದಿದ್ದಾನೆ. ಇದರಿಂದ ಪ್ರಯಾಣಿಕ ಬಸ್‌ನಿಂದ ಕೆಳಗೆ ಬೀಳುತ್ತಾನೆ. ಬಸ್‌ ಕಂಡಕ್ಟರ್‌ ಇಂಥಹ ವರ್ತನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬಹುಶಃ ಪ್ರಯಾಣಿಕ ಮದ್ಯಪಾನ ಮಾಡಿರಬಹುದು ಅಥವಾ ದುರ್ವರ್ತನೆ ತೋರಿರಬಹುದು ಎನ್ನುವ ಶಂಕೆಗಳಿವೆ. ಆದರ ಇಷ್ಟೊಂದು ಕಠೋರವಾಗಿ ವರ್ತಿಸುವುದು ಪ್ರಯಾಣಿಕನ ಜೀವನಕ್ಕೆ ಅಪಾಯ ತಂದೊಡ್ಡಬಹುದು ಎಂದು ಕೆಲವರು ಹೇಳಿದ್ದಾರೆ.

ಪ್ರಯಾಣಿಕ ಬಸ್‌ನಿಂದ ಕೆಳಗೆ ಬೀಳುತ್ತಿದ್ದಂತೆ ಬಸ್‌ ಅಲ್ಲಿಂದ ತೆರಳಿದೆ. ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಕೆಎ 21 ಎಫ್ 0002 ಬಸ್‌ ನಂಬರ್‌ನ ನಿರ್ವಾಹಕ ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ. ಆದರೆ ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಯಾವುದೇ ಅಧಿಕಾರ ನಿರ್ವಾಹಕರಿಗಿರುವುದಿಲ್ಲ. ಇಲ್ಲಿ ಬಸ್‌ ಕಂಡಕ್ಟರ್ ಮಾಡಿರುವುದು ತಪ್ಪು ಎಂದು ಕಾಣುತ್ತಿದ್ದು, ಹೀಗಾಗಿ ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಪುತ್ತೂರು ಕೆಎಸ್​​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+