ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

KSRTC: ಒಂದು ದಿನದಲ್ಲಿ 9 ದೇವಾಲಯ ದರ್ಶನ ಪಡೆಯಲು ಇಲ್ಲಿದೆ ಅವಕಾಶ!

|
Google Oneindia Kannada News

ಮಂಗಳೂರು, ಸೆ. 23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನಕ್ಕಾಗಿ ಪ್ಯಾಕೇಜ್ ಪ್ರವಾಸವನ್ನು ಆಯೋಜಿಸಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ಪ್ರಮುಖ ದೇವಾಲಯಗಳನ್ನು ಒಳಗೊಳ್ಳಲಿದೆ.

ರಾಜ್ಯ ಸಾರಿಗೆ ಸಂಸ್ಥೆಯು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಅನ್ನು ಆಯೋಜಿಸುತ್ತದೆ.

 ಮಂಗಳೂರು ಪಿಎಫ್ಐ ಕಚೇರಿ ಮೇಲೆ ಎನ್‌ಐಎ ದಾಳಿ ಅಂತ್ಯ; ಪಿಎಫ್ಐ, ಎಸ್‌ಡಿಪಿಐ ಆಕ್ರೋಶ ಮಂಗಳೂರು ಪಿಎಫ್ಐ ಕಚೇರಿ ಮೇಲೆ ಎನ್‌ಐಎ ದಾಳಿ ಅಂತ್ಯ; ಪಿಎಫ್ಐ, ಎಸ್‌ಡಿಪಿಐ ಆಕ್ರೋಶ

ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಟಿಕೆಟ್ ಕಾಯ್ದಿರಿಸಬಹುದು ಮತ್ತು ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸ ಪ್ಯಾಕೇಜ್‌ನ ಭಾಗವಾಗಿ ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಗುರುಪುರದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಮತ್ತು ಕಡಲತೀರಕ್ಕೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತದೆ.

KSRTC Mangaluru division to introduce Dasara darshan package in Dakshina Kannada

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೂ ತೆರಳಲಿದೆ.

ಈ ಪ್ಯಾಕೇಜ್ ಟೂರಿನಲ್ಲಿ ದೊಡ್ಡವರಿಗೆ 300 ರೂಪಾಯಿ ಮತ್ತು ಮಕ್ಕಳಿಗೆ 250 ರೂಪಾಯಿ ದರ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ (ಜೆಎನ್‌ಎನ್‌ಯುಆರ್‌ಎಂ) ನಗರ ಸಾರಿಗೆ ಬಸ್‌ಗಳನ್ನು ಪ್ಯಾಕೇಜ್ ಟೂರ್‌ಗೆ ಬಳಸಲಾಗುವುದು ಎಂದು ರಾಜೇಶ್ ಶೆಟ್ಟಿ ಹೇಳಿದ್ದಾರೆ.

ನವರಾತ್ರಿ ಉತ್ಸವದಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಇದೇ ಮೊದಲ ಬಾರಿಗೆ ಇಂತಹ ಪ್ಯಾಕೇಜ್ ಅನ್ನು ಪರಿಚಯಿಸುತ್ತಿದೆ ಎಂದು ತಿಳಿಸಿದ್ದಾರೆ.

ಒಂದು ದಿನದ ಪ್ರವಾಸವು ಬೆಳಗ್ಗೆ 8 ರಿಂದ ರಾತ್ರಿ 8.30 ರವರೆಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಾರಂಭವಾಗಲಿದೆ. ಜನರ ಪ್ರತಿಕ್ರಿಯೆಗೆ ಅನುಗುಣವಾಗಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಬಸ್‌ಗಳನ್ನು ಬಿಡಲು ನಿಗಮವು ಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.

English summary
Karnataka State Road Transport Corporation (KSRTC) Mangaluru division to introduce Mangaluru Dasara darshan package tour in Dakshina Kannada district. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X