• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮತ್ತೆ ತಾರಕಕ್ಕೇರಿದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ವಿವಾದ

|
Google Oneindia Kannada News

ಮಂಗಳೂರು, ಅಕ್ಟೋಬರ್. 14: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಿವಾದ ಶಮನವಾಗುವ ಯಾವುದೇ ಲಕ್ಷಣ ಕಂಡುಬರುತ್ತಿಲ್ಲ. ದಿನದಿಂದ ದಿನಕ್ಕೆ ಈ ವಿವಾದ ಜಟಿಲಗೊಳ್ಳುತ್ತಾ ಸಾಗುತ್ತಿದೆ.

ಸರ್ಪ ಸಂಸ್ಕಾರ ಸೇರಿದಂತೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜಾ ವಿಧಿವಿಧಾನ ನಡೆಸುವ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಮತ್ತೆ ತಾರಕಕ್ಕೇರಿದೆ.

ಕುಕ್ಕೆ ಸುಬ್ರಹ್ಮಣ್ಯ, ಇದೇನು ನಿನ್ನ ಕ್ಷೇತ್ರದಲ್ಲಿ ಭುಗಿಲೆದ್ದಿರುವ ವಿವಾದ?ಕುಕ್ಕೆ ಸುಬ್ರಹ್ಮಣ್ಯ, ಇದೇನು ನಿನ್ನ ಕ್ಷೇತ್ರದಲ್ಲಿ ಭುಗಿಲೆದ್ದಿರುವ ವಿವಾದ?

ಕಳೆದ ಹಲವಾರು ದಿನಗಳ ಬೆಳವಣಿಗೆಗಳು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಹೇಳಿಕೆ ಆರೋಪಗಳಿಂದ ಮನನೊಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ ಉಪವಾಸ ಕೂರುವ ನಿರ್ಧಾರ ಕೈಗೊಂಡಿದ್ದಾರೆ.

ಇದರಿಂದ ಈ ವಿವಾದ ಮತ್ತಷ್ಟು ಬಿಗಡಾಯಿಸುವ ಲಕ್ಷಣಗಳು ಕಂಡು ಬಂದಿವೆ.

ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಸುಬ್ರಹ್ಮಣ್ಯನ ಸೇವೆಗಳನ್ನ ನಡೆಸದಂತೆ ದೇವಸ್ಥಾನದ ಆಡಳಿತ ಮಂಡಳಿ ತಾಕೀತು ಮಾಡಿದ್ದ ಹಿನ್ನೆಲೆಯಲ್ಲಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವ ಸಮಸ್ಯೆ ನಿವಾರಣೆಗೆ ಯಾವ ತುಲಾ ಭಾರ ಸೇವೆ ಶ್ರೇಷ್ಠ?ಯಾವ ಸಮಸ್ಯೆ ನಿವಾರಣೆಗೆ ಯಾವ ತುಲಾ ಭಾರ ಸೇವೆ ಶ್ರೇಷ್ಠ?

"ಈ ದೇವಾಲಯದ ಆಡಳಿತ ಮಂಡಳಿ ಹೇಳಿಕೆ ಹಾಗೂ ನಿರ್ಧಾರಗಳಿಂದ ತಮಗೆ ಕಿರಿಕಿರಿ ಉಂಟಾಗಿದೆ. ಇದರ ಜೊತೆಗೆ ತನಗೆ ನಿತ್ಯ ಜಪ ಮಾಡಲೂ ತೊಂದರೆಯಾಗುತ್ತಿದೆ. ಅಲ್ಲದೇ ಗೋಶಾಲೆಗೆ ಬರುತ್ತಿದ್ದ ನೀರನ್ನೂ ನಿಲ್ಲಿಸಿ ತೊಂದರೆ ಕೊಡಲಾಗುತ್ತಿದೆ" ಎಂದು ಸ್ವಾಮೀಜಿ ಆರೋಪಿಸಿದ್ದಾರೆ.

ಮತ್ತೆ ಭುಗಿಲೆದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪ ಸಂಸ್ಕಾರ, ಆಶ್ಲೇಷ ಪೂಜಾ ವಿವಾದಮತ್ತೆ ಭುಗಿಲೆದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪ ಸಂಸ್ಕಾರ, ಆಶ್ಲೇಷ ಪೂಜಾ ವಿವಾದ

ಸುಬ್ರಹ್ಮಣ್ಯನ ದರುಶನಕ್ಕೂ ಅವಕಾಶ ನೀಡದಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ವಾಮೀಜಿ ಉಪವಾಸ ಆರಂಭಿಸಿದ್ದಾರೆ.

ಅಕ್ರಮ ಸರ್ಪ ಸಂಸ್ಕಾರ ಪೂಜೆ ವಿರುದ್ಧ ಸುಬ್ರಹ್ಮಣ್ಯದಲ್ಲಿ ಜನಜಾಗೃತಿ ಸಭೆಅಕ್ರಮ ಸರ್ಪ ಸಂಸ್ಕಾರ ಪೂಜೆ ವಿರುದ್ಧ ಸುಬ್ರಹ್ಮಣ್ಯದಲ್ಲಿ ಜನಜಾಗೃತಿ ಸಭೆ

ದಶಕಗಳಿಂದ ದೇವಾಲಯ ಹಾಗೂ ಮಠದ ನಡುವೆ ವಿವಾದ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ವಿವಾದ ತಾರಕಕ್ಕೆ ಏರಿದೆ. ದಿನಕ್ಕೆ ಒಂದು ಲೋಟ ನೀರು ಮಾತ್ರ ಕುಡಿದು ಅನಿರ್ಧಿಷ್ಟವಧಿ ಉಪವಾಸಕ್ಕೆ ಕೂತಿರುವ ಸ್ವಾಮೀಜಿ ನಿರ್ಧಾರದಿಂದ ಈ ವಿವಾದ ಮತ್ತಷ್ಟು ಜಟಿಲಗೊಂಡಂತಾಗಿದೆ.

English summary
Sri Kshetra Kukke Subramanya does not have any symptoms that resolve the dispute. Dispute is going to complicate day by day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X