ಕುಕ್ಕೆ ಸುಬ್ರಮಣ್ಯ ಚಿನ್ನದ ರಥ ವಿವಾದ : ಸರ್ಕಾರದ ಸ್ಪಷ್ಟನೆ

ಬೆಂಗಳೂರು, ಏಪ್ರಿಲ್ 29 : ಕುಕ್ಕೆ ಸುಬ್ರಮಣ್ಯ ಕ್ಷೇತ್ರದ ಚಿನ್ನದ ರಥದ ವಿಚಾರದ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ. ಸುಮಾರು 80 ಕೋಟಿ ರೂ. ಮೌಲ್ಯದ ಚಿನ್ನದ ರಥವನ್ನು ಕರ್ನಾಟಕ ಸರ್ಕಾರದ ಕಡೆಯಿಂದ ಸಮರ್ಪಣೆ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನವಾಗಿ ಚಿನ್ನದ ರಥ ನಿರ್ಮಿಸಿ, ಅರ್ಪಿಸುವ ಕುರಿತಂತೆ ಮಾಧ್ಯಮಗಳಲ್ಲಿ ವಿಭಿನ್ನ ವರದಿಗಳು ಪ್ರಕಟವಾಗುತ್ತಿವೆ. ಆದ್ದರಿಂದ, ಸರ್ಕಾರ ಸ್ಪಷ್ಟನೆಯನ್ನು ನೀಡಿದೆ.

ಈ ಯೋಜನೆಗೆ 2005 ರಲ್ಲಿಯೇ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಅಂದಿನ ದಿನಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಈ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ದೇವಾಲಯದಲ್ಲಿ ಲಭ್ಯವಿರುವ ಚಿನ್ನ ಬಳಸಿಕೊಂಡು ಉಳಿದ ಚಿನ್ನವನ್ನು ಬ್ಯಾಂಕಿನ ಮೂಲಕ ಖರೀದಿಸಲು ಸರ್ಕಾರ ಅನುಮೋದನೆ ನೀಡಿತ್ತು ಎಂದು ಸ್ಪಷ್ಟಪಡಿಸಲಾಗಿದೆ.

2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನೂತನ ಚಿನ್ನದ ರಥ ನಿರ್ಮಾಣಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿತ್ತು. ಅಂದು ರಥದ ನಿರ್ಮಾಣದ ಮೌಲ್ಯ 15 ಕೋಟಿ ಯಾಗಿತ್ತು. ಟೆಂಡರ್ ಪ್ರಕ್ರಿಯೆ ಸಹ ಪೂರ್ಣಗೊಂಡಿತ್ತು.

ರಥ ನಿರ್ಮಾಣದ ವೆಚ್ಚ

ರಥ ನಿರ್ಮಾಣದ ವೆಚ್ಚ

ಸರ್ಕಾರ ಈಗಾಗಲೇ ಮಾಡಿರುವ ಹಿಂದಿನ ಆದೇಶಗಳಲ್ಲಿ ಚಿನ್ನದ ರಥ ನಿರ್ಮಾಣಕ್ಕೆ ಸರ್ಕಾರದ ಅನುದಾನ ಬಳಸದೆ, ಸಾರ್ವಜನಿಕರ ದೇಣಿಗೆ ಸಂಗ್ರಹ ಹಾಗೂ ದೇವಾಲಯದ ಸಂಪನ್ಮೂಲಗಳಿಂದಲೇ ವೆಚ್ಚ ಭರಿಸುವಂತೆ ತಿಳಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಭಕ್ತರಿಂದ ಸಿಎಂಗೆ ಮನವಿ

ಭಕ್ತರಿಂದ ಸಿಎಂಗೆ ಮನವಿ

ಇತ್ತೀಚೆಗೆ ಕುಕ್ಕೆ ಸುಬ್ರಮಣ್ಯ ಕ್ಷೇತ್ರದ ಭಕ್ತರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಿಂದಿನ ಸರ್ಕಾರಿ ಆದೇಶಗಳನ್ನು ಹಾಜರುಪಡಿಸಿ, ನೆನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದರು.

ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

80 ಕೋಟಿ ವೆಚ್ಚ

80 ಕೋಟಿ ವೆಚ್ಚ

2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನೂತನ ಚಿನ್ನದ ರಥ ನಿರ್ಮಾಣಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿತ್ತು. ಅಂದು ರಥದ ನಿರ್ಮಾಣದ ಮೌಲ್ಯ 15 ಕೋಟಿ ಯಾಗಿತ್ತು. ಟೆಂಡರ್ ಪ್ರಕ್ರಿಯೆ ಸಹ ಪೂರ್ಣಗೊಂಡಿತ್ತು. ಈಗ ಚಿನ್ನದ ರಥ ನಿರ್ಮಾಣಕ್ಕೆ ಸುಮಾರು 80 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+