ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಕ್ಕೆ ದೇವಸ್ಥಾನದ ಆನೆ ಯಶಸ್ವಿನಿ ಆರೋಗ್ಯದಲ್ಲಿ ಏರುಪೇರು; ಉರುಳು ಸೇವೆ ಸಲ್ಲಿಸಿದ ಭಕ್ತ

|
Google Oneindia Kannada News

ಮಂಗಳೂರು, ಆಗಸ್ಟ್ 16: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿ ಕ್ಷೇತ್ರ ಶ್ರೀ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ 22 ವರ್ಷಗಳಿಂದ ಸೇವೆಯಲ್ಲಿದ್ದ ಆನೆ ಇಂದಿರಾ ಇತ್ತೀಚೆಗೆ ಅಸುನೀಗಿದ ಘಟನೆ ಮಾಸುವ ಮುನ್ನ ಮತ್ತೊಂದು ಸುದ್ದಿ ಹೊರಬಿದ್ದಿದೆ. ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಳದ ಆನೆ ಯಶಸ್ವಿನಿ ಆರೋಗ್ಯದಲ್ಲಿ ಕಳೆದ ಎರಡು‌ ದಿನಗಳಿಂದೀಚೆ ಏರುಪೇರಾಗಿದೆ.

 ಮೂಕಾಂಬಿಕೆಯ ಮೂಕ ಭಕ್ತೆಯ ಸಾವಿನ‌ ಸುತ್ತ! ಮೂಕಾಂಬಿಕೆಯ ಮೂಕ ಭಕ್ತೆಯ ಸಾವಿನ‌ ಸುತ್ತ!

ಆನೆ ಯಶಸ್ವಿನಿಗೆ ಭೇದಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್ ದುಬಾರೆಯಿಂದ ವೈದ್ಯರ ತಂಡ ಸುಬ್ರಹ್ಮಣ್ಯಕ್ಕೆ ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆನೆಯ ಆರೋಗ್ಯದ‌ ಕುರಿತು ದೇವಸ್ಥಾನ ಕಾಳಜಿ ವಹಿಸಿದ್ದು, ಪ್ರತಿನಿತ್ಯ ಆನೆಯ ಆರೋಗ್ಯದ ಕಡೆಗೆ ನಿಗಾ ಇಡಲಾಗಿದೆ.

Kukke Subramanya Temple Elephant Yashaswini Illness

ಈ ನಡುವೆ ಸುಳ್ಯ ಶಾಸಕ ಎಸ್.ಅಂಗಾರ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ಆನೆಯ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ. ಹದಿನೈದು ವರ್ಷಗಳ ಹಿಂದೆ ಶಾಸಕ ಆನಂದ್ ಸಿಂಗ್ ಆನೆಯನ್ನು ದೇವಸ್ಥಾನಕ್ಕೆ ನೀಡಿದ್ದರು. ಅತ್ಯಂತ ಲವಲವಿಕೆಯಿಂದ ಇದ್ದ ಯಶಸ್ವಿನಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಅಚ್ಚುಮೆಚ್ಚಿನ ಆನೆಯಾಗಿಯೂ ಗುರುತಿಸಿಕೊಂಡಿದೆ. ಈ ನಡುವೆ ಆನೆ ಶೀಘ್ರ ಗುಣಮುಖವಾಗಲೆಂದು ಪ್ರಾರ್ಥಿಸಿ ಭಕ್ತರೊಬ್ಬರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉರುಳು ಸೇವೆ ನಡೆಸಿದ್ದಾರೆ.

English summary
Sree Kukke Subramanya temple Elephant Yashasvini suffering from illness since 2 days. Now doctors from Dubare camp arrived to Subramanya for treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X