ಮಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಮಂಗಳೂರು, ಡಿಸೆಂಬರ್ 16: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಇದು ಅವರಿಗೆ ಮೊದಲ ಹುಟ್ಟು ಹಬ್ಬ. ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿರುವ ಕುಮಾರಸ್ವಾಮಿ ಅವರು ಕುಟುಂಬದವರ ಜೊತೆ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ .
ರಾಜ್ಯದ ಎಲ್ಲೆಡೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕುದ್ರೊಳಿ ಶ್ರೀ ಗೊಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾರ್ಚನೆ ನೆರವೇರಿಸುವ ಮೂಲಕ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಈ ರಾಜ್ಯದಲ್ಲಿ ಇನ್ನಷ್ಟು ಪ್ರಗತಿಪರ ಯೋಜನೆಗಳನ್ನು ಬಡವರಿಗಾಗಿ ರೂಪಿಸಲಿ, ದೇವರು ಅವರಿಗೆ ಇನ್ನಷ್ಟು ಶಕ್ತಿ ಮತ್ತು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಲಾಯಿತು .
ಈ ಸಂದರ್ಭದಲ್ಲಿ ಜಿಲ್ಲೆಯ ಯುವ ಜೆಡಿಎಸ್ ನ ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಫೈಝಲ್ , ಮಂಗಳೂರು ಉತ್ತರ ಪ್ರಧಾನ ಕಾರ್ಯದರ್ಶಿ ಭರತ್ ಜಿ ಹೆಗ್ಡೆ, ಉತ್ತರ ಅಧ್ಯಕ್ಷ ರತೀಶ್ ಕರ್ಕೇರ, ಲಿಕಿತ್ ಅಂಚನ್ ,ಉತ್ತರ ಉಪಾಧ್ಯಕ್ಷ ಹಿತೇಶ್ ರೈ,ವಿದ್ಯಾರ್ಥಿ ಜನತಾದಳ ಅಧ್ಯಕ್ಷ ಸಿನಾನ್ ಉಪಸ್ಥಿತರಿದ್ಧರು.












Click it and Unblock the Notifications