• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಳ್ಯದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

|

ಮಂಗಳೂರು, ಸೆಪ್ಟೆಂಬರ್. 27: ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ಪ್ರತಿಷ್ಠಿತ ಕೆವಿಜಿ ಡೆಂಟಲ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿನಿ ನೇಹಾ ಎ.ಥಾಮಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿರುವ ನೇಹಾ ಸುಳ್ಯದ ಮನೆ ಬಾಡಿಗೆಗೆ ಪಡೆದು ವಾಸವಾಗಿದ್ದರು.

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

ಕಳೆದ ರಾತ್ರಿ ಮನೆಯ ಕೊಠಡಿಯಲ್ಲಿ ನೇಹಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಗುರುವಾರ (ಸೆ.27) ಮುಂಜಾನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಮುಂದಿನ ತನಿಖೆಗೆ ಪೊಲೀಸರು ವಿದ್ಯಾರ್ಥಿನಿ ನೇಹಾ ಹೆತ್ತವರಿಗಾಗಿ ಕಾಯುತ್ತಿದ್ದಾರೆ. ನೇಹಾ ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ.

ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಮಣಿಪಾಲದ ಬಿಲ್ಡರ್

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ನಿನ್ನೆ ಬುಧವಾರ ಕೂಡ ಮಂಗಳೂರಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಅತ್ಮಹತ್ಯೆ ಶರಣಾಗಿದ್ದ. ಕ್ಷುಲ್ಲಕ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ನೆವಿಲ್ ಫರ್ನಾಂಡೀಸ್ ಉರ್ವಾದಲ್ಲಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.

English summary
Neha A Thomas a First year student of KVG dental college had committed suicide in his home at Sullia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X