ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

|
Google Oneindia Kannada News

Recommended Video

Dharmasthala Laksha Deepotsava 2018: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

ಮಂಗಳೂರು, ಡಿಸೆಂಬರ್ 05: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಪ್ರತಿವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವವು ಅದ್ದೂರಿಯಾಗಿ ನಡೆಯುತ್ತಿದ್ದು, ಹಿಂದಿನಿಂದಲೂ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು ಬೆಳಗುವ ಲಕ್ಷ ದೀಪೋತ್ಸವವನ್ನು ಆಚರಿಸುವುದು ಸಂಪ್ರದಾಯವಾಗಿದೆ.

ದೀಪೋತ್ಸವ ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಗೆ ಅತ್ಯಂತ ಪ್ರಿಯವಾದದ್ದು ಎಂದು ಹೇಳಲಾಗುತ್ತದೆ. ಹಿಂದೆ ದೀಪಗಳನ್ನೇ ಉರಿಸಿ ದೀಪೋತ್ಸವವನ್ನು ಆಚರಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗುತ್ತದೆ. ಹೀಗಾಗಿ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ವಿದ್ಯುತ್ ದೀಪಾಲಂಕಾರದ ಚಿತ್ತಾಕರ್ಷಕ ವೈಭವ ಕಂಗೊಳಿಸುತ್ತಿದೆ.

Laksha deepotsava held on Dharmasthala

ಧರ್ಮಸ್ಥಳ : ಲಕ್ಷ ದೀಪೋತ್ಸವ ನೋಡಲು ಬೇಕು ಸಾವಿರ ಕಣ್ಣುಧರ್ಮಸ್ಥಳ : ಲಕ್ಷ ದೀಪೋತ್ಸವ ನೋಡಲು ಬೇಕು ಸಾವಿರ ಕಣ್ಣು

ಪ್ರತಿವರ್ಷ ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯಲಿದ್ದು, ಕ್ಷೇತ್ರದ ದೇವರಾದ ಮಂಜುನಾಥ ಸ್ವಾಮಿಯ ಮೂರ್ತಿಯನ್ನು ಮೆರವಣಿಗೆ ಮಾಡಿ, ಪ್ರಮುಖ ಐದು ಕಟ್ಟೆಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇವರನ್ನು ನೋಡಲು ಕ್ಷೇತ್ರಕ್ಕೆ ಹೋಗಲಾಗದವರಿಗೆ ದೇವರೇ ಅವರ ಊರಿಗೆ ಬರುತ್ತಾನೆ ಎನ್ನುವ ನಂಬಿಕೆ ಇದ್ದು ಅದು ಇಂದಿಗೂ ಮುಂದುವರಿದಿದೆ.

Laksha deepotsava held on Dharmasthala

ಗ್ಯಾಲರಿ: ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಭ್ರಮ

ಲಕ್ಷದೀಪೋತ್ಸವದ ಅಂಗವಾಗಿ ಇಂದು ಶ್ರೀ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ನಾಳೆ ಗುರುವಾರ ಡಿಸೆಂಬರ್ 06 ರಂದು ಸಾಹಿತ್ಯ ಸಮ್ಮೇಳನವೂ ನಡೆಯಲಿದೆ.

English summary
Laksha deepotsava held on Shreekshetra Dharmasthala.Festival is held every year on the Kartik Masa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X