ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಒಪ್ಪಿಗೆ

|
Google Oneindia Kannada News

ಮಂಗಳೂರು, ನವೆಂಬರ್ 28 : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆಗಸ್ಟ್‌ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಘಾಟ್ ರಸ್ತೆ ಸಂಪೂರ್ಣ ಹಾಳಾಗಿತ್ತು. ಕೆಲವು ದಿನ ವಾಹನ ಸಂಚಾರ ನಿಷೇಧಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ನವೆಂಬರ್ 28ರಿಂದಲೇ ಅವಕಾಶ ನೀಡಿ ಆದೇಶ ಹೊರಡಿಸಿದ್ದಾರೆ. ಭಾರೀ ವಾಹನಗಳ ಸಂಚಾರದ ಮೇಲಿದ್ದ ನಿಷೇಧ ವಿಸ್ತರಣೆಯಾಗಿದೆ.

ಖಂಡಾಲ ಘಾಟ್ ರಸ್ತೆಯಂತೆ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿಖಂಡಾಲ ಘಾಟ್ ರಸ್ತೆಯಂತೆ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ

ನಿರಂತರವಾಗಿ ಸುರಿದ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆ ಹಾಳಾಗಿತ್ತು. ಮಂಗಳೂರು-ವಿಲ್ಲಪುರಂ ರಸ್ತೆಯಲ್ಲಿ 76 ಕಿ. ಮೀ. ಇಂದ 86 ಕಿ. ಮೀ. ತನಕ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಸೆ. 15ರಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

 ಇಂದಿನಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಆರಂಭ ಇಂದಿನಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಆರಂಭ

Light Vehicles Can Use Charmadi Ghat Road 24 Hours

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಮಾತ್ರ ವಾಹನ ಸಂಚಾರ ನಡೆಸುತ್ತಿತ್ತು. ಈ ಆದೇಶವನ್ನು ಮಾರ್ಪಾಡು ಮಾಡಿರುವ ಜಿಲ್ಲಾಧಿಕಾರಿಗಳು ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದಾರೆ.

ಮಣ್ಣಲ್ಲಿ ಮಣ್ಣಾದ ನಿಸರ್ಗ ಸುಂದರಿ ಚಾರ್ಮಾಡಿ; ಹಾಳೂರಾದ ಬಾಳೂರು ಅರಣ್ಯ ಪ್ರದೇಶ ಮಣ್ಣಲ್ಲಿ ಮಣ್ಣಾದ ನಿಸರ್ಗ ಸುಂದರಿ ಚಾರ್ಮಾಡಿ; ಹಾಳೂರಾದ ಬಾಳೂರು ಅರಣ್ಯ ಪ್ರದೇಶ

ಷರತ್ತುಗಳ ಅನ್ವಯ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಘಾಟ್ ರಸ್ತೆಯಲ್ಲಿ ಗಂಟೆಗೆ 20 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಬೇಕು. ಭೂ ಕುಸಿತದಿಂದ ಸಮಸ್ಯೆ ಆಗಿದ್ದು, ಜಾಗರೂಕತೆಯಿಂದ ಚಾಲನೆ ಮಾಡಬೇಕು. ಫೋಟೋ ತೆಗೆಯಲು ವಾಹನ ನಿಲ್ಲಿಸದಂತೆ ಸೂಚನೆ ನೀಡಲಾಗಿದೆ.

ಲಘು ವಾಹನಗಳು : ಕಾರು, ಜೀಪು, ಟೆಂಪೋ, ವ್ಯಾನ್, ಎಲ್‌ಸಿವಿ, ದ್ವಿಚಕ್ರ ವಾಹನಗಳು, ಆಂಬ್ಯುಲೆನ್ಸ್.

English summary
Dakshina Kannada deputy commissioner allowed light vehicles in Charmadi Ghat road 24 hours. Large vehicle yet to get approval for use Charmadi road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X