ದೇವರಗುಂಡಿ ಜಲಪಾತದಲ್ಲಿ ಬಿಕಿನಿ ಫೋಟೊಶೂಟ್ ಗೆ ಸ್ಥಳೀಯರ ಆಕ್ರೋಶ

ಮಂಗಳೂರು, ಅಕ್ಟೋಬರ್ 29: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿದ್ದು, ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಯದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೇವರಗುಂಡಿ ಜಲಪಾತವು ಇಲ್ಲಿನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದೆ. ಈ ಜಲಪಾತಕ್ಕೆ ಧಾರ್ಮಿಕ ಹಿನ್ನೆಲೆಯಿದೆ. ಶಿವನು ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ಇತಿಹಾಸವಿದೆ. ಇಂಥ ಪವಿತ್ರ ಸ್ಥಳದಲ್ಲಿ ಫೋಟೊಶೂಟ್ ಮಾಡಿಸಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದಿದ್ದಾರೆ.

Dakshina Kannada: Locals Opposed Models Photoshoot At Devaragundi Falls

ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿಗೆ ಸ್ಥಳೀಯರು ದೂರು ನೀಡಿದ್ದಾರೆ. ಆದರೆ ತಾವು ಇದಕ್ಕೆ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+