ಕರಾವಳಿಯಲ್ಲಿ ಬಿಜೆಪಿ ಕುತೂಹಲದ ನಡೆ; ಕಟೀಲ್ ಬದಲು ಬೇರೆ ಅಭ್ಯರ್ಥಿ?
ಮಂಗಳೂರು, ಫೆಬ್ರವರಿ 05: ಕರ್ನಾಟಕದ ಕರಾವಳಿ ಬಿಜೆಪಿಯ ಭದ್ರಕೋಟೆ. ಕರಾವಳಿ ಭಾಗದ ಪ್ರಮುಖ ಲೋಕಸಭಾ ಕ್ಷೇತ್ರವಾದ ದಕ್ಷಿಣ ಕನ್ನಡದಲ್ಲಿ ಈ ಬಾರಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಕಮಲ ಪಕ್ಷದ ಈ ನಡೆ ಅಚ್ಚರಿ ಮೂಡಿಸಿದೆ. ಕರ್ನಾಟಕ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲು ಬೇರೆ ಅಭ್ಯರ್ಥಿ ಆಯ್ಕೆಯಾದರೂ ಅಚ್ಚರಿ ಇಲ್ಲ.
ರಾಷ್ಟ್ರೀಯತೆ ಹಾಗೂ ಸಾಮಾಜಿಕ, ಹಿಂದೂ ಪರ ಕೆಲಸ ಮಾಡುತ್ತಿರುವ ಮುಖಂಡರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕಟೀಲ್‌ಗೆ ಟಿಕೆಟ್ ತಪ್ಪಿಸಲು ಸಾಧ್ಯವೇ? ಎಂಬ ಪ್ರಶ್ನೆ ಸಹಜ. ಆದರೆ ಈಗ ನಡೆಯುತ್ತಿರುವ ಒಂದಷ್ಟು ಬೆಳೆವಣಿಗೆ ಅಚ್ಚರಿಗೆ ಕಾರಣವಾಗಿದೆ.
ಪ್ರವೀಣ್ ನೆಟ್ಟಾರ ಹತ್ಯೆ ನಡೆದಾಗಲೇ ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಕಾರ್ಯಕರ್ತರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದೂ, ಕಟೀಲ್ ರಾಜ್ಯಾಧ್ಯಕ್ಷರಾಗಿದ್ದರೂ ಹಿಂದೂ ಕಾರ್ಯಕರ್ತರ ರಕ್ಷಣೆಗೆ ಏನು ಮಾಡಲಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ತಪ್ಪಿದಾಗಲೂ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಟಿಕೆಟ್ ಯಾರ ಕೈಗೆ?; ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ನೀಡದಿದ್ದರೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಪ್ರಶ್ನೆ. ಬ್ರಿಜೇಶ್ ಚೌಟ, ಮಹೇಶ್ ವಿಕ್ರಮ್ ಹೆಗ್ಡೆ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ.
ಸ್ಥಳೀಯ ಮಟ್ಟದಲ್ಲಿ ಹಿಂದೂ ಪರ ಕೆಲಸ ಮಾಡುತ್ತಿರುವ ಬ್ರಿಜೇಶ್ ಚೌಟ ಹಾಗೂ ಪತ್ರಕರ್ತ ಮಹೇಶ್ ವಿಕ್ರಮ್ ಹೆಗ್ಡೆ ಬಗ್ಗೆ ಯುವ ಹಿಂದೂ ಕಾರ್ಯಕರ್ತರು ಒಲವು ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರಿಯತೆ ಸಿದ್ಧಾಂತಕ್ಕಾಗಿ ಫೋಸ್ಟ್ ಕಾರ್ಡ್ ಆರಂಭಿಸಿದ್ದ ಮಹೇಶ್ ಹೆಗ್ಡೆ, ಸ್ವತಃ ಮೋದಿ ಟ್ವೀಟರ್‌ನಲ್ಲಿ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಫಾಲೋ ಮಾಡುವ ಹಂತಕ್ಕೆ ಹೆಸರು ಮಾಡಿದ್ದರು. ವಿಶೇಷವಾಗಿ ಹಿಂದೂ ಕಾರ್ಯಕರ್ತರ ಹತ್ಯೆಗಳಾದಾಗ ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಯಾನಗಳನ್ನ ನಡೆಸಿ ಅವರ ಕುಟುಂಬಗಳಿಗೆ ಹಣಕಾಸಿನ ನೆರವು ಒದಗಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈಗ ಹಿಂದೂ ಕಾರ್ಯಕರ್ತರು ಅವರ ಹೆಸರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಚಾಲ್ತಿಗೆ ತಂದಿದ್ದಾರೆ.
ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾದಾಗ ಪೋಸ್ಟ್ ಕಾರ್ಡ್ ಅಭಿಯಾನದ ಮೂಲಕ 86 ಲಕ್ಷ ಹಣಕಾಸಿನ ನೆರವನ್ನು ಅವರ ಕುಟುಂಬಕ್ಕೆ ಒದಗಿಸಿದ್ದರು. ಪ್ರವೀಣ್ ನೆಟ್ಟಾರ ಹತ್ಯೆಯಾದಾಗ ಅವರ ಕುಟುಂಬಕ್ಕೆ 38 ಲಕ್ಷ ಹರಿದು ಬಂದಿತ್ತು. ಇದೆಲ್ಲವನ್ನು ಅವರ ಕುಟುಂಬದವರ ಖಾತೆಗೆ ನೇರವಾಗಿ ಜಮಾ ಮಾಡಿಸುವ ಪಾರದರ್ಶಕ ಅಭಿಯಾನಗಳನ್ನು ವಿಕ್ರಮ್ ಹೆಗ್ಡೆ ನಡೆಸಿದ್ದರು. ಕಲ್ಲಡ್ಕ ಪ್ರಭಾಕರ್ ಅವರ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಮಧ್ಯಾಹ್ನದ ಬಿಸಿ ಉಟಕ್ಕೆ ಸರ್ಕಾರ ಅನುದಾನ ಕಡಿತ ಮಾಡಿದಾಗ ಭೀಕ್ಷಾಂದೇಹಿ ಎಂಬ ಅಭಿಯಾನಕ್ಕೆ ಕರೆ ಕೊಟ್ಟಿದ್ದ ಮಹೇಶ್ ವಿಕ್ರಮ್ ಹೆಗ್ಡೆ ದೊಡ್ಡ ಪ್ರಮಾಣದಲ್ಲಿ ನೆರವು ದೊರೆಯುವಂತೆ ಕಾರ್ಯ ನಿರ್ವಹಿಸಿದ್ದರು.
ವಿಕ್ರಮ ಫೌಂಡೇಶನ್ ಅಡಿಯಲ್ಲಿ ನೂರು ಮಕ್ಕಳನ್ನ ದತ್ತು ಪಡೆದು ವಿದ್ಯಾಭ್ಯಾಸಕ್ಕೆ ಬೆಳಕಾಗಿರುವ ಹೆಗ್ಡೆಯವರು, ಜಾತಿ ಮತ ನೋಡದೇ ಎಲ್ಲ ಧರ್ಮದ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಸುಳ್ಯದ ಕಡು ಬಡವರಿಗೆ ಮನೆ ಕಟ್ಟಿಸಿಕೊಡುವ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೆಲ್ಲವನ್ನ ಗಮನಿಸಿರುವ ಹಿಂದು ಕಾರ್ಯಕರ್ತರು ಬ್ರಿಜೇಶ್ ಚೌಟ ಅಥವಾ ಮಹೇಶ್ ವಿಕ್ರಮ್ ಹೆಗ್ಡೆಯವರಿಗೆ ಟಿಕೆಟ್ ನೀಡುವಂತೆ ಒಲವು ವ್ಯಕ್ತಪಡಿಸುತ್ತಿದ್ದಾರೆ ಎನ್ನುವುದು ಸದ್ಯದ ಮಾಹಿತಿ.
ಎದುರಾಳಿ ಯಾರು?; ದಕ್ಷಿಣ ಕನ್ನಡದ ಚುನಾವಣೆ ಮೇಲೆ ಜಾತಿವಾರು ರಾಜಕಾರಣ ಅಷ್ಟು ಪ್ರಭಾವ ಬೀರದಿದ್ದರೂ ಸಹ ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ಕೈ ತಪ್ಪುವುದನ್ನು ಕಾಂಗ್ರೆಸ್ ಎದುರು ನೋಡುತ್ತಿದೆ. ಒಂದು ವೇಳೆ ಕಟೀಲ್ ಬದಲು ಬಿಜೆಪಿ ಬ್ರಿಜೇಶ್ ಚೌಟ ಅಥವಾ ಮಹೇಶ್ ವಿಕ್ರಮ್ ಹೆಗ್ಡೆಗೆ ಟಿಕೆಟ್ ನೀಡಿದರೆ ಕಾಂಗ್ರೆಸ್‌ನಿಂದ ಈಡಿಗ- ಬಿಲ್ಲವ ಸಮುದಾಯದ ವಿನಯ ಕುಮಾರ್ ಸೊರಕೆಯನ್ನು ಕಣಕ್ಕಿಳಿಸಲು ತಂತ್ರ ಹೆಣೆಯುತ್ತಿದೆ. ಈ ಹಿಂದೆ ಬಂಟ ಸಮುದಾಯದ ಮಿಥುನ್ ರೈಗೆ ಟಿಕೆಟ್ ನೀಡಿದ್ದ ಕಾಂಗ್ರೆಸ್ ಈ ಬಾರಿ ತನ್ನ ತಂತ್ರವನ್ನು ಬದಲಾಯಿಸಿಕೊಳ್ಳುವ ಸಾಧ್ಯತೆ ಇದೆ.
2019ರ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ 774,285 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಮಿಥುನ್ ರೈ 499,664 ಮತಗಳನ್ನು ಪಡೆದಿದ್ದರು. ಎಸ್‌ಡಿಪಿಐನ ಮೊಹಮ್ಮದ್ ಇಲಿಯಾಸ್ 46,839 ಮತಗಳನ್ನು ಪಡೆದಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications