• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ತಪ್ಪಿದ ಅನಾಹುತ

|

ಮಂಗಳೂರು, ನವೆಂಬರ್. 21: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಘಟನೆ ಇಂದು ಬುಧವಾರ ಬೆಳ್ಳಂಬೆಳಗ್ಗೆ ಮಂಗಳೂರು ಹೊರವಲಯದ ನಂತೂರು ಸರ್ಕಲ್ ನಲ್ಲಿ ನಡೆದಿದೆ.

ವಿಷ ಅನಿಲ ಲೀಕೇಜ್: ನಮ್ಮ ಮೆಟ್ರೋ ವಿರುದ್ಧ ಎಫ್‌ಐಆರ್‌

ಮಂಗಳೂರು ಹೊರವಲಯದ ಸುರತ್ಕಲ್ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್ ನಿಂದ ಗ್ಯಾಸ್ ತುಂಬಿಸಿ ಬೆಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ನಂತೂರು ಸರ್ಕಲ್ ನಲ್ಲಿ ರಸ್ತೆಗೆ ಉರುಳಿ ಬಿದ್ದಿದ್ದು, ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾಗಿದೆ.

ನೀರು ಕಾಯಿಸುವ ಗ್ಯಾಸ್ ಗೀಸರ್ ಪ್ರಾಣವನ್ನೂ ತೆಗೆಯಬಹುದು ಎಚ್ಚರ

ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಅದೃಷ್ಟವಶಾತ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗಿಲ್ಲ. ಮುಂಜಾಗೃತ ಕ್ರಮವಾಗಿ ಟ್ಯಾಂಕರ್ ಉರುಳಿ ಬಿದ್ದ ಜಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ಸಂಚಾರವನ್ನು ಪೊಲೀಸರು ಬಂದ್ ಮಾಡಿದ್ದಾರೆ.

ಮೈಸೂರಿನಲ್ಲಿ ಹಳಿ ತಪ್ಪಿದ ಪೆಟ್ರೋಲಿಯಂ ತುಂಬಿದ ರೈಲು

ಮುಂಜಾನೆ 3 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಭಾರತ್ ಗ್ಯಾಸ್ ಸಂಸ್ಥೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟ್ಯಾಂಕರ್ ನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗಿದೆ.

English summary
LPG tanker rolls over at Nanthur Junction at Mangaluru on early hours of November 21
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X