ಚಂದ್ರಗ್ರಹಣ: ಕುಕ್ಕೆ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ದರ್ಶನ ಸಮಯ ಬದಲಾವಣೆ

ಕಾರವಾರ, ನವೆಂಬರ್‌, 05: ನವೆಂಬರ್ 8ರಂದು ಚಂದ್ರಗ್ರಹಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿವೆ.

ಚಂದ್ರ ಗ್ರಹಣ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 8ರಂದು ಯಾವುದೇ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಹಣ ಸ್ಪರ್ಶ ಸಮಯವಾದ 2:39ರಿಂದ ಗ್ರಹಣ ಮೋಕ್ಷ ಸಮಯ 6:19ರತನಕ ಮತ್ತು ರಾತ್ರಿ 7:30 ರಿಂದ 9 ರತನಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

lunar eclipse 2022 Darshan time change in many temples including Kukke Subrahmanya

ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲೂ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ. ಇನ್ನು ಕಟೀಲು ದೇವಸ್ಥಾನದಲ್ಲೂ ಗ್ರಹಣದ ದಿನ ದೇವರ ಪೂಜೆಯ ಸಮಯ ಬದಲಾವಣೆ ಆಗಲಿದೆ. ನವೆಂಬರ್ 8ರಂದು ಬೆಳಗ್ಗೆ 9:30ಕ್ಕೆ ದೇವರಿಗೆ ಪೂಜೆ ನಡೆಯುತ್ತದೆ. ಮಧ್ಯಾಹ್ನ ಭೋಜನ ಇರುವುದಿಲ್ಲ. ಬೆಳಗ್ಗೆ 11:30 ರ ತನಕ ಮಾತ್ರ ಫಲಾಹಾರ ಇರುತ್ತದೆ. ರಾತ್ರಿ 8 ಗಂಟೆಗೆ ಪೂಜೆಗಳು ನಡೆಯಲಿದ್ದು, ಭೋಜನವೂ ಇರುತ್ತದೆ. ಗ್ರಹಣ ಕಾಲದಲ್ಲಿ‌ ದೇಗುವ ತೆರೆದಿರುತ್ತದೆ. ಗ್ರಹಣ ಮಧ್ಯ ಕಾಲದವರೆಗೆ ದೇವರಿಗೆ ಅಭಿಷೇಕ ಮಾಡಲಾಗುತ್ತದೆ. ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ ಇದೆ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+