ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಗೋಲಿಬಾರ್‌ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ

|
Google Oneindia Kannada News

Recommended Video

ಮಂಗಳೂರು ಹಿಂಸಾಚಾರದ ಬಗ್ಗೆ ಸಿಸಿಟಿವಿ ದೃಶ್ಯಗಳು ಹೇಳೋ ಕಥೆನೇ ಬೇರೆ | MANGALORE | CAA | NRC |

ಬೆಂಗಳೂರು, ಡಿಸೆಂಬರ್ 23 : ಮಂಗಳೂರಿನಲ್ಲಿ ಡಿಸೆಂಬರ್ 19ರಂದು ಪೊಲೀಸರು ನಡೆಸಿದ ಗೋಲಿಬಾರ್‌ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಲಾಗಿದೆ. ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು.

ಕರ್ನಾಟಕ ಸರ್ಕಾರ ಸೋಮವಾರ ರಾತ್ರಿ ಈ ಕುರಿತು ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಯನ್ನಾಗಿ ನೇಮಿಸಿ, ವಿಚಾರಣೆ ನಡೆಸಲು ಆದೇಶ ನೀಡಲಾಗಿದೆ.

ಮಂಗಳೂರು ಗಲಭೆ; ಪೊಲೀಸರಿಂದ ಫೋಟೋ ಬಿಡುಗಡೆ ಮಂಗಳೂರು ಗಲಭೆ; ಪೊಲೀಸರಿಂದ ಫೋಟೋ ಬಿಡುಗಡೆ

ವಿಚಾರಣಾಧಿಕಾರಿಯು ಈ ಆದೇಶ ಹೊರಡಿಸಿದ ದಿನಾಂಕದಿಂದ 3 ತಿಂಗಳೊಳಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ಪೂರ್ಣಗೊಳಿಸಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ

Magisterial Probe On Police Golibar At Mangaluru

ಡಿಸೆಂಬರ್ 19 ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಭಾರಿ ಹೋರಾಟ ನಡೆದಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲುಗೋಲಿಬಾರ್‌ ನಡೆಸಿದ್ದರು. ಆಗ ಇಬ್ಬರು ಮೃತಪಟ್ಟಿದ್ದರು.

ಮಂಗಳೂರು ಗಲಭೆ ಪೊಲೀಸರ ಪೂರ್ವ ನಿಯೋಜಿತ ಮಂಗಳೂರು ಗಲಭೆ ಪೊಲೀಸರ ಪೂರ್ವ ನಿಯೋಜಿತ

ಪೊಲೀಸರು ಗೋಲಿಬಾರ್ ನಡೆಸಿದಾಗ ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಮೃತಪಟ್ಟಿದ್ದರು. ಕರ್ನಾಟಕ ಸರ್ಕಾರ ಗೋಲಿಬಾರ್ ಬಗ್ಗೆ ತನಿಖೆ ನಡೆಸುವುದಾಗಿ ಘೋಷಣೆ ಮಾಡಿತ್ತು. ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಲಾಗಿದೆ.

ಗೋಲಿಬಾರ್ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಗೋಲಿಬಾರ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಮಂಗಳೂರಿನಲ್ಲಿ ಗೋಲಿಬಾರ್ ನಡೆದ ಬಳಿಕ ನಗರದ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿತ್ತು. ಭಾನುವಾರ ಹಗಲು ಹೊತ್ತು ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಸೋಮವಾರ ಕರ್ಫ್ಯೂ ತೆರವು ಮಾಡಲಾಗಿದೆ. ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಇನ್ನೂ ಮುಂದುವರೆದಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಘಟನೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದ್ದರು. ವರದಿಯ ಅನ್ವಯ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಲಾಗಿದೆ. ಗೋಲಿಬಾರ್‌ನಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ.

English summary
Karnataka government ordered for magisterial probe Golibar at Mangaluru.On December 19, 2019 two killed in police golibar at Mangaluru in the time of protests against the controversial Citizenship Amendment Act (CAA).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X