ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಂಟ್ವಾಳದಲ್ಲಿ ಮಹಾರುದ್ರ ಯಾಗ
Recommended Video

ಮಂಗಳೂರು, ಡಿಸೆಂಬರ್ 05: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ಚುನಾವಣೆಯಲ್ಲಿ ಗೆಲುವಿನ ಲೆಕ್ಕಾಚಾರ , ತಂತ್ರಗಾರಿಕೆ ಆರಂಭವಾಗಿದೆ. ಈ ನಡುವೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಲಾಗುತ್ತಿದೆ.
ಮೋದಿ ಅವರಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗ ಬರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಾರುದ್ರ ಯಾಗ ನಡೆಸಲಾಗಿದೆ.

ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು, ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಯಾಗ ಆಯೋಜನೆ ಮಾಡಲಾಗಿತ್ತು. ಕಾರಿಂಜ ಕೊಡಂಬೆಟ್ಟು ರಾಘವೇಂದ್ರ ಭಟ್ ಪೌರೋಹಿತ್ಯದಲ್ಲಿ ಈ ಯಾಗ ಮಾಡಲಾಗಿದೆ. ಬೆಳಗ್ಗೆ 7ರಿಂದ ಆರಂಭವಾವ ರುದ್ರ ಯಾಗ 11.30 ಕ್ಕೆ ಪೂರ್ಣಾಹುತಿಯಾಗಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಶ್ರೀರಾಮಾಂಜನೇಯ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದರು.












Click it and Unblock the Notifications