ಮಹಾ ಶಿವರಾತ್ರಿ 2023: ಧರ್ಮಸ್ಥಳಕ್ಕೆ ಹರಿದು ಬಂದ ಭಕ್ತ ಸಾಗರ
ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಪ್ರತಿ ವರ್ಷದಂತೆ ವಿವಿಧ ಪಾದಯಾತ್ರಿಗಳ ಸಂಘಟನೆಗಳು ಶ್ರೀಕ್ಷೇತ್ರ ಧರ್ಮಸ್ಥಳವನ್ನು ಸೇರಿದೆ. 50 ಸಾವಿರಕ್ಕೂ ಅಧಿಕ ಭಕ್ತರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮ
ಮಂಗಳೂರು, ಫೆಬ್ರವರಿ 18: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಶಿವರಾತ್ರಿ ಸಂಭ್ರಮ ಕಳೆಗಟ್ಟಿದೆ. ಅಸಂಖ್ಯಾತ ಶಿವಭಕ್ತರು ಧರ್ಮಸ್ಥಳದಲ್ಲಿ ಜಮಾವಣೆಗೊಂಡಿದ್ದು, ಸಂಜೆ ಆರು ಗಂಟೆಯಿಂದ ಶ್ರೀ ಕ್ಷೇತ್ರದಲ್ಲಿ ಜಾಗರಣೆ ಆರಂಭವಾಗಲಿದೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಶಿವ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಐವತ್ತು ಸಾವಿರಕ್ಕೂ ಅಧಿಕ ಭಕ್ತರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.
ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಪ್ರತಿ ವರ್ಷದಂತೆ ವಿವಿಧ ಪಾದಯಾತ್ರಿಗಳ ಸಂಘಟನೆಗಳು ಶ್ರೀಕ್ಷೇತ್ರ ಧರ್ಮಸ್ಥಳ ವನ್ನು ಸೇರಿದೆ.
ಈಗಾಗಲೇ ಸುಮಾರು ಐವತ್ತು ಸಾವಿರ ಮಂದಿ ಪಾದಯಾತ್ರಿಗಳು ಈಗಾಗಲೇ ಧರ್ಮಸ್ಥಳಕ್ಕೆ ಬರುವುದಾಗಿ ಹೆಸರು ನೋಂದಾಯಿಸಿದ್ದಾರೆ. ಶಿರಾಡಿ, ಚಾರ್ಮಾಡಿ, ಆಗುಂಬೆ ಘಾಟ್ ಮೂಲಕ ಪಾದಾಯಾತ್ರಿಗಳು ಶ್ರೀಕ್ಷೇತ್ರ ಧರ್ಮಸ್ಥಳವನ್ನು ತಲುಪಿದ್ದಾರೆ. ಪಾದಯಾತ್ರಿಗಳ ಮಾಹಿತಿಗಾಗಿ 55 ಕಡೆಗಳಲ್ಲಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಭಾಗಶಃ ಪಾದಾಯಾತ್ರಿಗಳು ಈಗಾಗಲೇ ಕ್ಷೇತ್ರವನ್ನು ಸೇರಿದ್ದು, ಉಜಿರೆಯಲ್ಲಿ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಂಗಣ, ಅನ್ನಪೂರ್ಣ ಛತ್ರದ ಹಿಂಭಾಗ, ಗಂಗೋತ್ರಿ, ಸಾಕೇತ ವಸತಿ ಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.
ಪಾದಯಾತ್ರೆಯಲ್ಲಿ ರಸ್ತೆ ಸಂಚಾರ ಕಾರ್ಯಾಲಯ ಹಾಗೂ ಮಾಹಿತಿ ನಿಯಮಗಳನ್ನು ಪಾಲಿಸಿ, ಸ್ವಚ್ಛತೆ ಕಾಪಾಡುವಂತೆ ಕ್ಷೇತ್ರದ ವತಿಯಿಂದ ನಿರ್ದೇಶನ ನೀಡಲಾಗಿದೆ.ಪಾದಯಾತ್ರಿಗಳ ಸ್ವಾಗತ ಮತ್ತು ಆತಿಥ್ಯಕ್ಕೆ ಸ್ವಯಂ ಸೇವಕರ ತಂಡ ಸಜ್ಜಾಗಿದೆ ಎಸ್‌ಡಿಎಂ ಆಸ್ಪತ್ರೆಯ ಆಶ್ರಯದಲ್ಲಿ 15 ಮಂದಿ ವೈದ್ಯರ ತಂಡ ಪಾದಯಾತ್ರಿಗಳ ಉಚಿತ ಸೇವೆ ನೀಡಲಾಗುತ್ತಿದೆ.

ಸಂಜೆ ಆರು ಗಂಟೆಯ ವೇಳೆಗೆ ಧರ್ಮಸ್ಥಳ ಕ್ಷೇತ್ರದ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಲಿದ್ದಾರೆ..ಪ್ರವಚನದ ಬಳಿಕ ಇಡೀ ರಾತ್ರಿ ಭಕ್ತರು ಶಿವ ನಾಮ ಸ್ಮರಣೆ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆಯನ್ನು ಮಾಡಲಿದ್ದಾರೆ.
ದೇವಸ್ಥಾನದಲ್ಲಿ ಸಂಜೆ ಗಂಟೆಯಿಂದ ಶ್ರೀ ಮಂಜುನಾಥ ಸ್ವಾಮಿಗೆ ಆಹೋರಾತ್ರಿ ಶತರುದ್ರಾಭಿಷೇಕ, ಎಳನೀರು ಅಭಿಷೇಕ ನಡೆಯಲಿದೆ. ಭಾನುವಾರ ಬೆಳಗ್ಗಿನ ಜಾವ ಕ್ಷೇತ್ರದಲ್ಲಿ ರಥೋತ್ಸವ ನಡೆಯಲಿದೆ. ಈ ಸಂಧರ್ಭದಲ್ಲಿ ಲಕ್ಷಾಂತರ ಮಂದಿ ಭಕ್ತರು ಸೇರುವ ಸಾಧ್ಯತೆಗಳಿವೆ. ಇನ್ನು ಮಹಾ ಶಿವರಾತ್ರಿ ಸಂಧರ್ಭದಲ್ಲಿ ಕೆಎಸ್ಆರ್‌ಟಿಸಿ ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.












Click it and Unblock the Notifications