ಮತ್ತೊಬ್ಬ ಕುಖ್ಯಾತ ದನಗಳ್ಳನನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

ಮಂಗಳೂರು, ಆಗಸ್ಟ್.03: ಕೆಲದಿನಗಳ ಹಿಂದೆ ಸಂಚಲನ ಮೂಡಿಸಿದ್ದ ನಗರದ ಮಹಾಲಿಂಗೇಶ್ವರ ದೇವಾಲಯದ ದನಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬಾ ಬೆಂಗ್ರೆ ನಿವಾಸಿ ಅಹಮ್ಮದ್ ಕಬೀರ್ ಅಲಿಯಾಸ್ ಬೆಂಗ್ರೆ ಕಬೀರ್(30) ಎಂದು ಗುರುತಿಸಲಾಗಿದೆ.

ಇದೇ ಜುಲೈ.05 ರಂದು ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಪಾಂಡೇಶ್ವರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 2 ದನ ಹಾಗೂ ಒಂದು ಕರುವನ್ನು ಹಾಡ ಹಗಲೇ ಅಪಹರಿಸಲಾಗಿತ್ತು.

ಮಂಗಳೂರು ಪೊಲೀಸ್ ಕಮಿಷನರ್ ಅವರ ನಿವಾಸದ ಪಕ್ಕದಲ್ಲಿ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಹಿಂದೆ ನಡೆದ ಈ ದನಗಳ್ಳತನ ಪ್ರಕರಣ ನಗರದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡಿತ್ತು. ಈ ಬಗ್ಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು.

Main accused arrested in Shri Mahalingeshwara temple cattle theft case

ಈ ಘಟನೆಯ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ ಎಂಬಾತನನ್ನು ಇತ್ತೀಚೆಗೆ ಬಂಧಿಸಿದ್ದರು.

ಆತನಿಂದ ಕಳ್ಳತನ ಮಾಡಿದ 2 ದನ ಹಾಗೂ ಕರುವನ್ನು ಸಾಗಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ಕಾರನ್ನು ಸ್ವಾದೀನಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಕುಖ್ಯಾತ ದನಗಳ್ಳ ಅಹಮ್ಮದ್ ಕಬೀರ್ ನನ್ನು ಈಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ಧ ಈ ಹಿಂದೆ ದನಕಳ್ಳತನಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ ಠಾಣೆ ಹಾಗೂ ಮಂಗಳೂರು ನಗರದ ಬಜ್ಪೆ, ಉಳ್ಳಾಲ, ಕೊಣಾಜೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಗಳಲ್ಲಿ 13 ಪ್ರಕರಣಗಳು, ಪಣಂಬೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳು ದಾಖಲಾಗಿವೆ.

ಈತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳ ಪುಣ್ಯಕೋಟಿ ಗೋಶಾಲೆಯಿಂದ ದನ ಕಳ್ಳತನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದನು ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+