• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮಳಲಿ ಮಸೀದಿ ವಿವಾದ- ವಿಎಚ್‌ಪಿ ಅರ್ಜಿ ವಿಚಾರಣೆಗೆ ಅಂಗೀಕಾರ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್‌, 09: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್​ಪಿ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ವಿಎಚ್​ಪಿ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾಲಯವು ಜನವರಿ 8, 2023ಕ್ಕೆ ವಿಚಾರಣೆಯನ್ನು ಮುಂದೂಡಿದೆ.ಅಕ್ಟೋಬರ್‌ 17ರಂದು ವಿಚಾರಣೆ

ಅಕ್ಟೋಬರ್‌ 17ರಂದು ನಡೆದಿದ್ದ ವಿಚಾರಣೆ

ಮಸೀದಿ ವಿವಾದದ ಬಗ್ಗೆ ಕಳೆದ ಅಕ್ಟೋಬರ್‌ 17ರಂದು ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ಇದೆ. ವಿಚಾರಣೆಗಾಗಿ ಕೋರ್ಟ್​ ಕಮಿಷನರ್ ನೇಮಿಸಬೇಕು ಎಂದು ಹಿಂದುಪರ ಸಂಘಟನೆಗಳು ಮನವಿ ಮಾಡಿದ್ದವು. ಕಳೆದ ಬಾರಿ ವಿಚಾರಣೆಯ ವೇಳೆ ನ್ಯಾಯಾಲಯವು ಸದ್ಯದ ಮಟ್ಟಿಗೆ ಮಳಲಿ ಮಸೀದಿ ಕಟ್ಟಡವನ್ನು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೇಳಿತ್ತು. ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ. ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುಪರ ಸಂಘಟನೆಗಳು ಮನವಿ ಮಾಡಿದ್ದವು. ಇದನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರ ನ್ಯಾಯಾಯಕ್ಕೆ ಇಲ್ಲ ಎಂದು ಹೇಳಿದ್ದವು.

ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್​ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಮನವಿಯನ್ನು ಸಲ್ಲಿಸಿತ್ತು. ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಇಂತಹ ಆದೇಶ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯವು ಆಗಸ್ಟ್ 27ರಂದೇ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗಿತ್ತು. ಆದರೆ ಅಕ್ಟೋಬರ್‌ 17ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ನಂತರ ಮತ್ತೆ ತೀರ್ಪು ಕಾಯ್ದಿರಿಸಿದ್ದು, ಬುಧವಾರ ನವೆಂಬರ್‌ 9ಕ್ಕೆ ಮುಂದೂಡಲಾಗಿತ್ತು. ಬುಧವಾರ ತೀರ್ಪು ನೀಡಿರುವ ನ್ಯಾಯಾಲಯವು ವಿಎಚ್​ಪಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ. ಮುಂದಿನ ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ.

Breaking: ಮಳಲಿ ಮಸೀದಿ ವಿವಾದ: ತೀರ್ಪು ಪ್ರಕಟ ದಿನಾಂಕ ನ.9ಕ್ಕೆ ಮುಂದೂಡಿದ ಕೋರ್ಟ್Breaking: ಮಳಲಿ ಮಸೀದಿ ವಿವಾದ: ತೀರ್ಪು ಪ್ರಕಟ ದಿನಾಂಕ ನ.9ಕ್ಕೆ ಮುಂದೂಡಿದ ಕೋರ್ಟ್

English summary
Today Malali Masjid dispute verdict announced by Additional Civil Court of Mangaluru, court accepted VHP's petition, said will hear matter on January 8, 2023. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X