ಬೆಳ್ತಂಗಡಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಯುವಕನ ಬಂಧನ

ಮಂಗಳೂರು, ಅಕ್ಟೋಬರ್ 10:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನುಗ್ಗಿದ ಆರೋಪಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮಿತ್ತಬಾಗಿಲು ನಿವಾಸಿ ಹಂಝ ಎಂಬುವವರನ್ನು ಬಂಧಿಸಿದ್ದಾರೆ. ರಾತ್ರಿ ಮನೆಯಲ್ಲಿ ಬಾಲಕಿ ಒಬ್ಬಳೇ ಇರುವ ಸಂದರ್ಭ ನೋಡಿ ಆರೋಪಿ ಹಂಝ ಹೊಲಿಯಲು ಬಟ್ಟೆ ಕೊಡುವ ನೆಪದಲ್ಲಿ ಮನೆ ಪ್ರವೇಶಿಸಿದ್ದಾನೆ .

ನಂತರ ಮನೆಯಲ್ಲಿ ಯಾರು ಇಲ್ಲ ಎಂದು ಖಾತ್ರಿಪಡಿಸಿಕೊಂಡು ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ . ಈ ಸಂದರ್ಭ ಬಾಲಕಿ ಆರೋಪಿ ಹಂಝನಿಂದ ತಪ್ಪಿಸಿಕೊಂಡು ಹೊರ ಓಡಿದ್ದಾಳೆ . ಬಾಲಕಿಯ ಬೊಬ್ಬೆ ಕೇಳಿ ಸ್ಥಳೀಯರು ಮನೆಯ ಬಳಿ ಸೇರುತ್ತಿದ್ದಂತೆ ಆರೋಪಿ ಹಂಝ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Man arrested for rape attempt on minor girl

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಆರೋಪಿ ಹಂಝನನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+