ಮಂಗಳೂರು : ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆ
ಮಂಗಳೂರು, ಜ. 22 : ಮಗಳ ಮೇಲೆ ತಂದೆಯೇ ಆರು ತಿಂಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಮಂಗಳೂರು ತಾಲೂಕಿನ ಮಲ್ಲೂರು ಸಮೀಪ ನಡೆದಿದ್ದು, ಆರೋಪಿ ತಂದೆಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿನಿಯಾಗಿರುವ ಬಾಲಕಿ ಮೇಲೆ ಆಕೆಯ ಕಳೆದ ಆರು ತಿಂಗಳಿನಿಂದ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಸ್ವತಃ ಆಕೆಯ ತಾಯಿಗೂ ಈ ವಿಷಯ ಗೊತ್ತಿರಲಿಲ್ಲ. ಕೊನೆಗೆ ವಿದ್ಯಾರ್ಥಿನಿ ತನ್ನ ಮೇಲೆ ತಂದೆ ನಡೆಸುತ್ತಿರುವ ಲೈಂಗಿಕ ಕಿರುಕುಳ ಬಗ್ಗೆ ತನ್ನ ಶಾಲೆಯ ಶಿಕ್ಷಕಿ ಬಳಿ ಹೇಳಿಕೊಂಡಿದ್ದಳು.

ಶಾಲೆಯ ಮುಖ್ಯ ಶಿಕ್ಷಕರು ಬಾಲಿಕಾಶ್ರಮಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದರು. ಅಲ್ಲಿಂದ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಲಾಯಿತು. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಮಕ್ಕಳ ಕಲ್ಯಾಣ ಸಮಿತಿಯವರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. [ಮಂಗಳೂರು: ಸಾಕು ಪ್ರಾಣಿಯನ್ನು ಬಿಡದ ಕಾಮಾಂಧರು!]
ದೂರಿನ ಅನ್ವಯ ಠಾಣೆಯ ಮಹಿಳಾ ಸಿಬ್ಬಂದಿ ಬಾಲಕಿಯ ಮನೆಗೆ ತೆರಳಿ ತನಿಖೆ ನಡೆಸಿದಾಗ ವಿದ್ಯಾರ್ಥಿನಿ ನಡೆದ ಪ್ರತಿ ಘಟನೆಯನ್ನು ವಿವರಿಸಿದ್ದಾಳೆ. ಈ ಸಂದರ್ಭ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದುದು ತನಿಖೆ ನಡೆಸಿದ ಪೊಲೀಸರಿಗೆ ಖಚಿತಗೊಂಡಿದೆ. [ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಾಲಕರು]
ಆ ಬಳಿಕ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಂತ್ರಸ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.












Click it and Unblock the Notifications