ಅಶ್ಲೀಲ ವಿಡಿಯೋ ತೋರಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ವ್ಯಕ್ತಿ ಬಂಧನ

ಮಂಗಳೂರು, ಜುಲೈ 15: ಬ್ಯಾಗ್ ಖರೀದಿಸಲು ಬಂದಿದ್ದ ವಿದ್ಯಾರ್ಥಿನಿಗೆ ಅಂಗಡಿಯಲ್ಲಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು ಹೊರವಲಯ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬ್ಯಾಗ್ ಖರೀದಿಗೆ ಅಂಗಡಿಗೆ ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನೀಡಲಾಗಿದೆ ಎಂದು ಆರೋಪಿಸಿದ್ದು, ಅಂಗಡಿ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ನಂತರ ಬಂಧಿಸಿದ್ದಾರೆ.

ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ಅಂಗಡಿಗೆ ವಿದ್ಯಾರ್ಥಿನಿಯು ತಂದೆಯೊಟ್ಟಿಗೆ ಬಂದಿದ್ದು, ಈ ಸಂದರ್ಭದಲ್ಲಿ ಬ್ಯಾಗ್ ತೋರಿಸುವ ನೆಪದಲ್ಲಿ ಅಂಗಡಿಯಲ್ಲಿದ್ದ ವ್ಯಕ್ತಿಯು ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

Man arrested for showing obscene video to girl

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಲೀಂ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+