ಪ್ರೇಮಸಲ್ಲಾಪದ ವಿಡಿಯೋ ವೈರಲ್; ಬಂಟ್ವಾಳದಲ್ಲಿ ವ್ಯಕ್ತಿ ಬಂಧನ
ಮಂಗಳೂರು, ಜೂನ್ 27: ಯುವತಿಯೊಂದಿಗಿನ ಪ್ರೇಮ ಸಲ್ಲಾಪದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಯುವತಿ ಜೊತೆಯಲ್ಲಿ ನಗ್ನವಾಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಸ್ಥಳೀಯ ಸಂಘಟನೆಯ ದೂರಿನ ಅನ್ವಯ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬಂಟ್ವಾಳದ ಟಿಪ್ಪು ನಗರ ನಿವಾಸಿ ಮೋನು ಯಾನೆ ಅಬ್ದುಲ್ ರಹಿಮಾನ್ (55) ಅವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೀನು ವ್ಯಾಪಾರಿಯಾಗಿರುವ ಅಬ್ದುಲ್ ರಹಿಮಾನ್ ಗೆ ಎರಡು ಮದುವೆಯಾಗಿ 9 ಮಕ್ಕಳಿದ್ದಾರೆ. ಈತ ಯುವತಿಯೊಂದಿಗೆ ನಗ್ನವಾಗಿ ಪ್ರೇಮ ಸಲ್ಲಾಪವಾಡುವ ವಿಡಿಯೋ ಚಿತ್ರೀಕರಣ ನಡೆಸಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.












Click it and Unblock the Notifications