ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನಾರ್ದನ ಪೂಜಾರಿಗೆ ಜೀವ ಬೆದರಿಕೆ ಒಡ್ಡಿದ್ದ ವ್ಯಕ್ತಿಯ ಬಂಧನ

|
Google Oneindia Kannada News

ಮಂಗಳೂರು, ಮಾರ್ಚ್ 19: ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಅವರನ್ನು ಎನ್ ಕೌಂಟರ್ ಮಾಡಬೇಕು ಎಂದು ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿರುವ ಹಕೀಮ್ ಎಂದು ಗುರುತಿಸಲಾಗಿದೆ.

ಪುತ್ತೂರಿನ ಮುಕ್ವೆ ನಿವಾಸಿ ಹಕೀಮ್ ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿದ್ದು, ಇಂದು ಮನೆಗೆ ಅಲ್ಲಿಂದ ಹಿಂತಿರುಗುತಿದ್ದಾಗ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಎನ್ ಕೌಂಟರ್ ಮಾಡಿ ಕೊಲ್ಲಬೇಕು ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ.

ಜನಾರ್ಧನ ಪೂಜಾರಿಯನ್ನು ಎನ್ ಕೌಂಟರ್ ನಲ್ಲಿ ಕೊಲ್ಲಬೇಕು, ವೈರಲ್ ಆದ ವಾಯ್ಸ್ ಮೆಸೇಜ್ಜನಾರ್ಧನ ಪೂಜಾರಿಯನ್ನು ಎನ್ ಕೌಂಟರ್ ನಲ್ಲಿ ಕೊಲ್ಲಬೇಕು, ವೈರಲ್ ಆದ ವಾಯ್ಸ್ ಮೆಸೇಜ್

ಆಡಿಯೋ ಕ್ಲಿಪ್ ನಲ್ಲಿ 'ಜನಾರ್ಧನ ಪೂಜಾರಿ ಆರ್ಎಸ್ಎಸ್ ಜೊತೆಗೆ ನಂಟು ಹೊಂದಿದ್ದಾರೆ. ಅವರು ಕಾಂಗ್ರೆಸ್ಸಿನಲ್ಲಿ ಸೋಲಲು ಇದೇ ವರ್ತನೆ ಕಾರಣ. ರಾಮ ಮಂದಿರದ ಪರವಾಗಿ ಮಾತನಾಡಿ ಬಿಜೆಪಿ ಮತ್ತು ಆರ್ ಎಸ್ಎಸ್ ಜೊತೆಗಿನ ನಂಟನ್ನು ಬಹಿರಂಗಪಡಿಸಿದ್ದಾರೆ. ಇಂಥ ವ್ಯಕ್ತಿಯನ್ನು ದೇಶದಲ್ಲಿ ಬದುಕಲು ಬಿಡಬಾರದು. ಎನ್ ಕೌಂಟರ್ ನಡೆಸಿ ಸಾಯಿಸಬೇಕು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಹಕೀಮ್ ಹೇಳಿಕೊಂಡಿದ್ದ.

Man arrested in Mangaluru airport who called Poojaris encounter

 ಜನಾರ್ದನ ಪೂಜಾರಿ ವಿರುದ್ಧ ಕ್ರಮಕ್ಕೆ ಜೆಡಿಎಸ್ ಒತ್ತಾಯ ಜನಾರ್ದನ ಪೂಜಾರಿ ವಿರುದ್ಧ ಕ್ರಮಕ್ಕೆ ಜೆಡಿಎಸ್ ಒತ್ತಾಯ

ಜನಾರ್ದನ ಪೂಜಾರಿಯವರಿಗೆ ಜೀವ ಬೆದರಿಕೆ ಒಡ್ಡಿದವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಜೆ. ಆರ್.ಲೋಬೋ ಸೇರಿದಂತೆ ಹಲವು ಮಂದಿ ಪೊಲೀಸರು ಆಗಿನ ಪೊಲೀಸ್ ಆಯುಕ್ತ ಟಿಆರ್ ಸುರೇಶ್ ಗೆ ದೂರು ಸಲ್ಲಿಸಿದ್ದರು.

English summary
Mangaluru police arrested a man in Mangaluru airport who called for Poojari's encounter. Arrested man identified as Hakim from Puttur who is employed in Saudi Arabia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X