ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ವ್ಯಕ್ತಿಯ ಬಂಧನ
ಮಂಗಳೂರು ಏಪ್ರಿಲ್ 25 : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾದ ವ್ಯಕ್ತಿ ಪೊಲೀಸ್ ಸ್ಟೇಷನ್ ನ ಲಾಕಪ್ ನಲ್ಲಿ ತನಗೆ ತಾನೆ ಶಿಕ್ಷೆ ವಿಧಿಸಿಕೊಂಡ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕಸಬ ಗ್ರಾಮದ ಮುರ ನಿವಾಸಿ ಶಂಷೇರ್ ಖಾನ್ (50) ಎಂಬಾತನನ್ನು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದ ಮೇಲೆ ಬಂಧಿಸಲಾಗಿದೆ. ಈತ ಕಳೆದ ಒಂದು ವರ್ಷದಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಬಾಲಕಿಗೆ ತನ್ನ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ಈತ ತೋರಿಸುತ್ತಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಆದರೆ ಬಂಧನಕ್ಕೊಳಗಾದ ಶಂಷೇರ್ ಖಾನ್ ಕಳೆದ ರಾತ್ರಿ ಸ್ಟೇಷನ್ ನ ಲಾಕಪ್ ಸರಳಿಗೆ ತಲೆ ಗುದ್ದಿಕೊಂಡು ಗಾಯ ಮಾಡಿಕೊಂಡಿದ್ದಾನೆ. ತಲೆಗೆ ಗಾಯವಾಗಿರುವ ಆರೋಪಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.












Click it and Unblock the Notifications