ಕಾಫಿ ಡೇ ಸಿದ್ಧಾರ್ಥ್ ಸತ್ತ ಜಾಗದಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

ಮಂಗಳೂರು, ಜನವರಿ 03: ಕೆಫೆ ಕಾಫಿ ಡೇ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

28 ವರ್ಷದ ಯುವಕನೊಬ್ಬ ಇಂದು ಬೆಳಿಗ್ಗೆ 6:30ರ ಸುಮಾರಿಗೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನ ಮೃತದೇಹ ಪತ್ತೆಯಾಗಿದೆ. ನದಿಗೆ ಹಾರಿದ ಯುವಕನನ್ನು ಉಳ್ಳಾಲಬೈಲ್ ನಿವಾಸಿ ನಾವೇಶ್ ಎಂದು ಗುರುತಿಸಲಾಗಿದೆ. ಬೆಳಗ್ಗಿನ ಜಾವ ಮನೆಯಿಂದ ಹೊರಟವರು ನೇತ್ರಾವತಿ ನದಿ ಸೇತುವೆ ಬಳಿ ಬೈಕ್ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾವೇಶ್ ಅವರು ಕುತ್ತಾರು ಸಮೀಪ ಶಾಮಿಯಾನ ಹಾಗೂ ನೀರಿನ ಟ್ಯಾಂಕರ್ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಯ ಹಿಂದೆ ಆರ್ಥಿಕ ಮುಗ್ಗಟ್ಟಿನ ಸಮಸ್ಯೆಯಿದೆ ಎಂದು ಶಂಕಿಸಲಾಗಿದೆ.

Man Committed Suicide At Nethravathi River In Mangaluru

ನಾವೇಶ್ ಅವಿವಾಹಿತರಾಗಿದ್ದು, ತಾಯಿ, ತಂದೆ, ಇಬ್ಬರು ಸಹೋದರರಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಇದೀಗ ಆತನ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ ನೇತ್ರಾವತಿ ನದಿಯಲ್ಲಿ ಈಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+