ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದಿಯಲ್ಲಿ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದವಗೆ ಪದ್ಮಶ್ರೀ ಗೌರವ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರಿನ ಅಕ್ಷರ ಸಂತ ಎಂದೇ ಖ್ಯಾತರಾಗಿರುವ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.

Recommended Video

This Orange seller from Karnataka win Padma shri Award | PADMA SHRI | ORANGE SELLER | KARNATAKA

ಇವರು ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ.

Breaking: ಕರ್ನಾಟಕದ ಇಬ್ಬರು ತೆರೆ-ಮರೆ ಸಾಧಕರಿಗೆ ಪದ್ಮಶ್ರೀ ಗೌರವBreaking: ಕರ್ನಾಟಕದ ಇಬ್ಬರು ತೆರೆ-ಮರೆ ಸಾಧಕರಿಗೆ ಪದ್ಮಶ್ರೀ ಗೌರವ

ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

ಹಾಜಬ್ಬ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ

ಹಾಜಬ್ಬ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ

2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್-ಐಬಿಎನ್ ರಿಯಲ್ ಹೀರೋ ಪ್ರಶಸ್ತಿ ನೀಡಿ ಗೌರವಿಸಿತ್ತು.

ರಸ್ತೆಯಲ್ಲಿ ಕಿತ್ತಳೆ ಹಣ್ಣು ಮಾರುವ ಹಾಜಬ್ಬ

ರಸ್ತೆಯಲ್ಲಿ ಕಿತ್ತಳೆ ಹಣ್ಣು ಮಾರುವ ಹಾಜಬ್ಬ

ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

ಶಾಲೆ ಕಟ್ಟಲು ಪ್ರೇರೇಪಣೆ ಆ ಒಂದು ಘಟನೆ

ಶಾಲೆ ಕಟ್ಟಲು ಪ್ರೇರೇಪಣೆ ಆ ಒಂದು ಘಟನೆ

ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಅಂದೇ ಶಾಲೆ ಕಟ್ಟುವ ನಿರ್ಣಯ ಮಾಡಿದರು ಹಾಜಬ್ಬ.

ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ ಹಾಜಬ್ಬ

ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ ಹಾಜಬ್ಬ

ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.

English summary
Harekala Hajabba use to sell oranges for living but he build a school for children and gave free education. He now got Padma Sri award.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X