ಸಿಸಿಬಿ ಪೊಲೀಸರ ಕಾರ್ಯಾಚರಣೆ:ಎಂಡಿಎಂಎ ಹೊಂದಿದ್ದ ಯುವಕನ ಬಂಧನ
ಮಂಗಳೂರು, ಫೆಬ್ರವರಿ 28:ಮಂಗಳೂರು ಮಾದಕ ವಸ್ತು ಎಂಡಿಎಂಎ ಹಬ್ ಆಗುತ್ತಿದೆಯಾ? ಇಂತಹದೊಂದು ಅನುಮಾನ ಇತ್ತೀಚೆಗೆ ಮೂಡಲಾರಂಭಿಸಿದೆ. ಮಂಗಳೂರಿನ ಯುವಜನತೆ ಈ ಎಂಡಿಎಂಎಯತ್ತ ಹೆಚ್ಚು ಆಕರ್ಷಿತರಾಗುತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ಎಂಡಿಎಂಎ ಮಾದಕ ವಸ್ತು ಸರಬರಾಜು ಮಾಡಲಾಗುತ್ತಿದೆ.
ಇದೀಗ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತು ಹೊಂದಿದ ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರು ದಾಳಿ ನಡೆಸಿ, ಸುರತ್ಕಲ್ ನ ನಿವಾಸಿ ಮಹಮ್ಮದ್ ಶಫಿಕ್ (21) ಎಂಬಾತನನ್ನು ಬಂಧಿಸಿದ್ದಾರೆ.

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (Methylene dioxy methamphetamine) MDMA ಅನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರೆತಿತ್ತು.

ಬಂಧಿತನಿಂದ 1,80 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇತರರು ಭಾಗಿಯಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.












Click it and Unblock the Notifications