ಮಂಗಳೂರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ: ಮೂವರ ಬಂಧನ

ಮಂಗಳೂರು, ಸೆಪ್ಟೆಂಬರ್.26: ಮಂಗಳೂರು ಹೊರವಲಯದ ಕುಂಟಿಕಾನ ಎಂಬಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ 3 ಮಂದಿ ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಸನ್ ರಾಯಲ್ ರೆಸಿಡೆನ್ಸಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು 3 ಜನರನ್ನು ಮಾಲು ಸಮೇತ ಬಂಧಿಸಿದ್ದಾರೆ.

ಬಂಧಿತರನ್ನು ಗುರುಪುರ ನಿವಾಸಿ ಮಹಮದ್ ಶಾಕೀರ್( 23), ಪಂಜಿಮೊಗರು ನಿವಾಸಿ ನದೀಮ್(26) ಹಾಗೂ ಕಾವೂರು ನಿವಾಸಿ ಫಕ್ರುದ್ದೀನ್ ( 26) ಎಂದು ಗುರುತಿಸಲಾಗಿದೆ. ಇವರನ್ನು ಗಾಂಜಾ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾಗಲೇ ಬಂಧಿಸಲಾಗಿದೆ.

Managluru police seized MDMA crystals 3 arrested

ಬಂಧಿತರಿಂದ ಗಾಂಜಾ ಪ್ಯಾಕೆಟ್ ಗಳು ಹಾಗು ಅತ್ಯಂತ ದುಬಾರಿ ಎಂದೇ ಹೇಳಲಾಗುವ 20 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಅದಲ್ಲದೇ 3 ಮೊಬೈಲ್ ಫೋನ್ , 74 ಸಾವಿರ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತು ಹಾಗೂ ಸೊತ್ತುಗಳ ಒಟ್ಟು ಮೌಲ್ಯ ರೂ.2.20 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+