ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 23 : 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಇದಕ್ಕಾಗಿ 'ಮನೆ-ಮನೆಗೆ ಕಾಂಗ್ರೆಸ್' ಎಂಬ ಕಾರ್ಯಕ್ರಮವನ್ನು ಇಂದಿನಿಂದ (ಸೆ.23) ಆರಂಭಿಸಿದೆ.

ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಬೇಕೆಂಬ ಪರಿಕಲ್ಪನೆಯಡಿ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದರಂತೆ ಇಂದು ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

Mane-Manege Congress campaign begins in Mangaluru today

ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ನಗರದ ಶಿವಭಾಗ್ ನ ರಸ್ತೆಗಳಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕರು ಅಲ್ಲಿಯ ಮನೆ-ಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಸಿದರು .

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ,ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ,ಎಐಸಿಸಿ ಉಸ್ತುವಾರಿ ವಿಷ್ಣುನಾಥನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Mane-Manege Congress campaign begins in Mangaluru today

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, "ಫೋನ್ ಕದ್ದಾಲಿಕೆ ವಿಚಾರದಲ್ಲಿ ಬಿಜೆಪಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಬಿಜೆಪಿ ನಾಯಕರ ಬಗ್ಗೆ ನಮ್ಮಲ್ಲಿ ಕೂಡ ದಾಖಲೆಗಳಿವೆ. ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಅವರು ಹೇಳಿದರು.

ಬಿಜೆಪಿ ನಾಯಕರು ಸುಳ್ಳುಗಳ ಸರಮಾಲೆಯನ್ನೇ ಹೆಣೆಯುತ್ತಿದ್ದಾರೆ. ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಅಡ್ಡಮಾರ್ಗ ಹಿಡಿಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

English summary
Mane-Manege Congress campaign has begin in the Mangaluru city near Shivabagh on Sept 23. The minister Tanvir sait visited the houses and handed over booklets released by the KPCC which aims at informing households about the benefits they have received under various welfare schemes
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X