ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ

|
Google Oneindia Kannada News

ಮಂಗಳೂರು, ಮಾರ್ಚ್ 02: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲ ರಾವ್ ಆಯ್ಕೆಯಾದರು. ಈ ಬಾರಿಯೂ ಮೇಯರ್ ಮತ್ತು ಉಪಮೇಯರ್ ಪಟ್ಟ ಬಿಜೆಪಿಗೆ ಲಭಿಸಿದೆ.

ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಬಿಜೆಪಿ ಸದಸ್ಯರಾದ ಪ್ರೇಮಾನಂದ ಶೆಟ್ಟಿ ಮತ್ತು ಸುಮಂಗಲಾ ರಾವ್ 46 ಮತಗಳನ್ನು ಪಡೆದು ಜಯಗಳಿಸಿದರು.

ಮಂಗಳೂರು; ಮತ್ತೆ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿದ ದುಷ್ಕರ್ಮಿಗಳುಮಂಗಳೂರು; ಮತ್ತೆ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿದ ದುಷ್ಕರ್ಮಿಗಳು

ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಕಾಂಗ್ರೆಸ್‌ನ ಅನಿಲ್ ಕುಮಾರ್ ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ 14 ಮತಗಳು ಲಭಿಸಿದವು.

ಮಂಗಳೂರು; ನ್ಯಾಪ್ ಕಿನ್‌ನಲ್ಲಿ ಚಿನ್ನ, ಇಬ್ಬರು ಮಹಿಳೆಯರ ಬಂಧನ

Mangaluru city corporation

ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಜೆಸಿಂತಾ ವಿಜಯಿ ಆಲ್ಳ್ರೆಡ್ 14 ಮತಗಳನ್ನು ಪಡೆದರು. ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಎಸ್‌ಡಿಪಿಐನ ಇಬ್ಬರು ಸದಸ್ಯರು ತಟಸ್ಥರಾಗಿ ಉಳಿದರು.

ಮಂಗಳೂರು-ಕುಟುಟಾ ನಡುವೆ ವೋಲ್ವೊ ಬಸ್ ಸೇವೆ ಮಂಗಳೂರು-ಕುಟುಟಾ ನಡುವೆ ವೋಲ್ವೊ ಬಸ್ ಸೇವೆ

2019ರ ನವೆಂಬರ್‌ನಲ್ಲಿ ನಡೆದ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು ಎಸ್‌ಡಿಪಿಐನ ಇಬ್ಬರು ಸದಸ್ಯರು ಆಯ್ಕೆಯಾಗಿದ್ದರು.

ನೂತನವಾಗಿ ಆಯ್ಕೆಯಾದ ಮೇಯರ್ ಮತ್ತು ಉಪ ಮೇಯರ್‌ ಅನ್ನು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅಭಿನಂದಿಸಿದರು. ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಪಟ್ಟರು.

English summary
BJP's Premanand Shetty elected as mayor and Sumangala Rao elected as deputy mayor of Mangaluru City Corporation. Mayor election held on March 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X