ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಗರಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್

|
Google Oneindia Kannada News

ಮಂಗಳೂರು, ಜು. 24: ಹಬ್ಬ ಹರಿದಿನಗಳಿಗು ಕೊರೊನಾವೈರಸ್ ಪರಿಣಾಮ ಜೋರಾಗಿಯೆ ತಟ್ಟಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಅದರಲ್ಲೂ ನಾಗರಪಂಚಮಿ ದಿನದಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ತೆರೆಯದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿದೆ. ಈ ಬಗ್ಗೆ ಆಡಳಿತ ಆಡಳಿತ ಮಂಡಳಿಯ ಪ್ರಕಟಣೆ ಭಕ್ತರಿಗೆ ನಿರಾಸೆ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದಾದ್ಯಂತ ಭಕ್ತರ ದಂಡು ಹರಿದು ಬರುತ್ತಿತ್ತು. ಆದರೇ ಇದೇ ಮೊದಲ ಬಾರಿಗೆ ನಾಗರಪಂಚಮಿಯಂದು ಭಕ್ತರಿಗೆ ದೇಗುಲಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ.

Recommended Video

China launches Mars probe during Pandemic | Oneindia Kannada

ಪ್ರಕಟಣೆ ಹೊರಡಿಸಿರುವ ದೇವಸ್ಥಾನ ಆಡಳಿತ ಮಂಡಳಿ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈ ಬಾರಿ ಅರ್ಚಕರಿಂದ ಮಾತ್ರ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಗುತ್ತಿದೆ. ಇನ್ನೂ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ದೇಗುಲಕ್ಕೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ನಾಗರಪಂಚಮಿಯ ದಿನದ ಸೇವೆಗಳು, ಸೇವಾ ಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ.

Mangalore District Kukke Subramanya Temple Will Closed On Nagara Panchami For Devotees

ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
Kukke Subramanya temple will closed on Nagara Panchami for devotees,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X