ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಮಂಗಳೂರು ಗೋಲಿಬಾರ್: ಸರ್ಕಾರದಿಂದ ಮೃತರ ಕುಟುಂಬಕ್ಕಿಲ್ಲ ಪರಿಹಾರ"

|
Google Oneindia Kannada News

ಮಂಗಳೂರು, ಡಿಸೆಂಬರ್.25: ಮಂಗಳೂರು ಗೋಲಿಬಾರ್ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಳ್ಳುತ್ತಿವೆ. ಗಲಭೆ ಸೃಷ್ಟಿಸಲು ಮೊದಲೇ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿತ್ತು. ಅದಕ್ಕಾಗಿ ನೆರೆ ರಾಜ್ಯಗಳಿಂದಲೂ ಜನರನ್ನು ಕರೆಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಮಂಗಳೂರು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಜಲೀಲ್ ಹಾಗೂ ನೌಸಿನ್ ಕುಟುಂಬಕ್ಕೆ ಪರಿಹಾರ ನೀಡಬೇಕೋ ಬೇಡವೋ ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮೊದಲು ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಸರ್ಕಾರ, ಇದೀತ ಈ ಬಗ್ಗೆ ಯೋಚನೆ ಮಾಡುತ್ತಿದೆ.

ಮಂಗಳೂರು ಗಲಭೆಗೆ ಮೊದಲೇ ನಡೆದಿತ್ತಾ ಪ್ಲಾನ್..? ಸಿಸಿಟಿವಿಯಲ್ಲಿ ಸೆರೆಮಂಗಳೂರು ಗಲಭೆಗೆ ಮೊದಲೇ ನಡೆದಿತ್ತಾ ಪ್ಲಾನ್..? ಸಿಸಿಟಿವಿಯಲ್ಲಿ ಸೆರೆ

ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಕಾರಣವೂ ಕೂಡಾ ಇದೆ. ಕಳೆದ ಡಿಸೆಂಬರ್.19 ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಹೋರಾಟ ದಿಢೀರ್ ಉಗ್ರ ಸ್ವರೂಪ ಪಡೆದುಕೊಂಡಿತು. ಪೊಲೀಸರ ಮೇಲೆ ಮುಗಿಬಿದ್ದ ಉದ್ರಿಕ್ತರ ಗುಂಪು ಏಕಾಏಕಿ ಕಲ್ಲುತೂರಾಟ ನಡೆಸಿತು. ನೋಡ ನೋಡುತ್ತಿದ್ದಂತೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ಪೋಟೋ ಹಾಗೂ ಸಿಸಿ ಕ್ಯಾಮರಾ ದೃಶ್ಯಾವಳಿಗಳು ಹೊಸ ಅನುಮಾನಗಳನ್ನು ಹುಟ್ಟು ಹಾಕುತ್ತಿವೆ.

ಇಬ್ಬರು ಮೃತ ಕುಟುಂಬಕ್ಕೆ ಸರ್ಕಾರದಿಂದಿಲ್ಲ ಪರಿಹಾರ?

ಇಬ್ಬರು ಮೃತ ಕುಟುಂಬಕ್ಕೆ ಸರ್ಕಾರದಿಂದಿಲ್ಲ ಪರಿಹಾರ?

ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ನೌಸಿನ್ ಹಾಗೂ ಜಲೀಲ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಇಬ್ಬರ ಕುಟುಂಬಕ್ಕೂ ರಾಜ್ಯ ಸರ್ಕಾರ ಮೊದಲು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಆದರೆ, ಈಗ ಇಬ್ಬರ ಕುಟುಂಬಕ್ಕೆ ಸದ್ಯ ಸರ್ಕಾರದಿಂದ ಪರಿಹಾರ ನೀಡುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರದ ನಿರ್ಧಾರಕ್ಕೆ ಸಿಎಂ ಬಿಎಸ್ ವೈ ಸ್ಪಷ್ಟನೆ

ಸರ್ಕಾರದ ನಿರ್ಧಾರಕ್ಕೆ ಸಿಎಂ ಬಿಎಸ್ ವೈ ಸ್ಪಷ್ಟನೆ

ಇಬ್ಬರು ಮೃತರ ಕುಟುಂಬಕ್ಕೆ ಸದ್ಯ ಪರಿಹಾರ ನೀಡದಿರಲು ತೀರ್ಮಾನಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅದಕ್ಕೆ ಕಾರಣವನ್ನು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಅವರು ಮಾತನಾಡಿದ್ದು, ಗಲಭೆ ಸೃಷ್ಟಿಸುವಲ್ಲಿ ಮೃತರ ಕೈವಾಡ ಇದೆಯೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟವಾಗಬೇಕು. ನಂತರವಷ್ಟೇ ಪರಿಹಾರ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.

ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ

ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಕಳೆದ ಡಿಸೆಂಬರ್.19ರಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಿಡಿಯೋ ಹಾಗೂ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಉದ್ರಿಕ್ತರ ಗುಂಪು ಮೊದಲೇ ಎಲ್ಲ ತಯಾರಿಗಳನ್ನು ಮಾಡಿಕೊಂಡಿರುವ ಅನುಮಾನ ಹುಟ್ಟಿಕೊಂಡಿದೆ. ಈ ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಮೊದಲು ತನಿಖೆ ನಡೆಸಲಾಗುತ್ತದೆ. ಗಲಭೆ ಸೃಷ್ಟಿಸುವಲ್ಲಿ ಮೃತರ ಪಾತ್ರವಿಲ್ಲ ಎಂಬುದು ಸ್ಪಷ್ಟವಾದರೆ ಮಾತ್ರ ಸರ್ಕಾರದಿಂದ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ಹಿಂಸಾಚಾರ: ಸಿಸಿಟಿವಿ ದೃಶ್ಯಗಳು ಹೇಳುತ್ತೆ ಹೊಸ ಕಥೆಯೊಂದನ್ನಾ!ಮಂಗಳೂರು ಹಿಂಸಾಚಾರ: ಸಿಸಿಟಿವಿ ದೃಶ್ಯಗಳು ಹೇಳುತ್ತೆ ಹೊಸ ಕಥೆಯೊಂದನ್ನಾ!

Array

ಕಲ್ಲು ತೂರಾಟಕ್ಕೆ ಮೊದಲೇ ಹಾಕಿದ್ದರಾ ಸ್ಕೆಚ್?

ಇನ್ನು, ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಗೂಡ್ಸ್ ಗಾಡಿಯಲ್ಲಿ ಪ್ರತಿಭಟನಾಕಾರರು ಕಲ್ಲನ್ನು ತರಿಸಿಕೊಂಡಿದ್ದು ಬಯಲಾಗಿದೆ. ಗೂಡ್ಸ್ ಗಾಡಿಯಲ್ಲಿ ಕಲ್ಲಿನ ಮೂಟೆಗಳನ್ನು ತರಿಸಿಕೊಂಡು ಉದ್ರಿಕ್ತರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆ ತನಿಖೆ ನಡೆಸಿದ ನಂತರವಷ್ಟೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ತೀರ್ಮಾನಿಸಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಲೆಲ್ಲ ಗೋಲಿಬಾರ್ ಎಂದ ಸಿದ್ದರಾಮಯ್ಯರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಲೆಲ್ಲ ಗೋಲಿಬಾರ್ ಎಂದ ಸಿದ್ದರಾಮಯ್ಯ

English summary
Mangalore Golibar: No Compensation For Deceased Family From State Government. Chief Minister B.S.Yadiyurappa Order To Investigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X