ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷರ ರಾಜೀನಾಮೆ

ಮಂಗಳೂರು, ಜೂ. 22 : ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಎಂ.ಬಿ. ಸದಾಶಿವ ಅವರು ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಅದು ಅಂಗೀಕಾರವಾಗಿರಲಿಲ್ಲ. ಸದ್ಯ ರಾಜೀನಾಮೆ ಅಂಗೀಕಾರವಾಗಿದೆ ಎಂದು ಸದಾಶಿವ ಅವರು ಹೇಳಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ.ಬಿ.ಸದಾಶಿವ ಅವರು, ಲೋಕಸಭಾ ಚುನಾವಣೆಗೆ ಮೊದಲೇ ವೈಯಕ್ತಿಕ ಕಾರಣಕ್ಕೆ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೆ. ಆದರೆ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ರಾಜೀನಾಮೆ ಅಂಗೀಕರಿಸಿರಲಿಲ್ಲ. [ರೈಲ್ವೆ ದರ ಏರಿಕೆ ಖಂಡಿಸಿದ ದೇವೇಗೌಡ]

ಸದ್ಯ, ತಾನು ಆ ಹುದ್ದೆಯಲ್ಲಿ ಮುಂದುವರಿಯಲು ಇಷ್ಟ ಪಡುವುದಿಲ್ಲ ಎಂದು ಒತ್ತಾಯಪೂರ್ವಕವಾಗಿ ತಿಳಿಸಿದ ಹಿನ್ನೆಲೆಯಲ್ಲಿ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಸದಾಶಿವ ಅವರು ತಿಳಿಸಿದರು. ನೂತನ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯುವ ತನಕ ಜಿಲ್ಲಾ ಕಾರ್ಯಾಧ್ಯಕ್ಷರಾದ ಮುಹಮ್ಮದ್ ಕುಂಞಿ ಅವರು ಅಧ್ಯಕ್ಷ ಹುದ್ದೆಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಸದಾಶಿವ ರಾಜೀನಾಮೆ

ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಸದಾಶಿವ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಎಂ.ಬಿ. ಸದಾಶಿವ ಅವರು ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ತಮ್ಮ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಸದಾಶಿವ ಅವರು ಹೇಳಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯುವ ತನಕ ಜಿಲ್ಲಾ ಕಾರ್ಯಾಧ್ಯಕ್ಷರಾದ ಮುಹಮ್ಮದ್ ಕುಂಞಿ ಅವರು ಅಧ್ಯಕ್ಷ ಹುದ್ದೆಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ

ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ

ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡು ಯಾರನ್ನೂ ನೋಯಿಸದೆ, ಪಕ್ಷದ ನಾಯಕರ ಮತ್ತು ಇತರ ರಾಜಕೀಯ ಪಕ್ಷಗಳ ಜತೆ ಉತ್ತಮ ಬಾಂಧವ್ಯದಿಂದ ಕಾರ್ಯನಿರ್ವಹಿಸಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಸದಾಶಿವ ಅವರು ಹೇಳಿದ್ದಾರೆ.

ಹೊಂದಾಣಿಕೆಯೇ ಪಕ್ಷ ದುರ್ಬಲಗೊಳ್ಳಲು ಕಾರಣ

ಹೊಂದಾಣಿಕೆಯೇ ಪಕ್ಷ ದುರ್ಬಲಗೊಳ್ಳಲು ಕಾರಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಲ್ಲಿ ಸಿಪಿಎಂ, ಬಳಿಕ ಬಿಜೆಪಿ ಹಾಗೂ ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಎಸ್‌ಡಿಪಿಐ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡದ್ದೇ ಜೆಡಿಎಸ್‌ ಪಕ್ಷ ಜಿಲ್ಲೆಯಲ್ಲಿ ದುರ್ಬಲಗೊಳ್ಳಲು ಕಾರಣ ಎಂದು ಎಂ.ಬಿ. ಸದಾಶಿವ ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಜನರ ನಿರೀಕ್ಷೆ ಹುಸಿ ಮಾಡಿದೆ

ಕಾಂಗ್ರೆಸ್ ಜನರ ನಿರೀಕ್ಷೆ ಹುಸಿ ಮಾಡಿದೆ

ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಶಿಕ್ಷಣ ರಂಗವನ್ನು ಖಾಸಗಿಗೆ ವಹಿಸಿಕೊಟ್ಟು ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದೆ. ಆಂತರಿಕ ಭಿನ್ನಮತ, ಎಂಎಲ್‌ಸಿ ನೇಮಕಾತಿಯಲ್ಲಿ ಗೊಂದಲ, ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಸ್ಥೆ ಮುಂತಾದ ಅವ್ಯವಸ್ಥೆಗಳಿಂದ ರಾಜ್ಯದ ಆಡಳಿತ ಸಂಪೂರ್ಣವಾಗಿ ಕುಸಿದಿದೆ ಎಂದು ಸದಾಶಿವ ಅವರು ಹೇಳಿದರು.

ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ

ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ

ಮಂಗಳೂರು ಪಾಲಿಕೆಯ ಜೆಡಿಎಸ್‌ ಸದಸ್ಯ ಅಜೀಜ್‌ ಕುದ್ರೋಳಿ ಅವರು ಮನವಿ ಸಲ್ಲಿಸಲು ಹೋದಾಗ ಅಧಿಕಾರಿಗಳು ಅವರನ್ನು ನಿಂದಿಸಿ ಬಳಿಕ ಕೇಸು ದಾಖಲಿಸಿರುವ ಕ್ರಮ ಖಂಡನೀಯ. ಈ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಎಂ.ಬಿ. ಸದಾಶಿವ ಅವರು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+