ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಪಿಎ ಕಾಲೇಜಿನಲ್ಲಿ ಪೊಲೀಸರಿಂದ ಲಾಠಿಚಾರ್ಜ್

By Mahesh
|
Google Oneindia Kannada News

ಮಂಗಳೂರು, ಮಾ.20: ಇಲ್ಲಿನ ಪಿಎ ಕಾಲೇಜಿನಲ್ಲಿ ಕಳೆದ ಐದಾರು ದಿನಗಳಿಂದ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಗುರುವಾರ ತಾರಕಕ್ಕೇರಿತ್ತು. ವಿದ್ಯಾರ್ಥಿಗಳ ಬೇಡಿಕೆಗೆ ಮಣಿದ ಕಾಲೇಜು ಆಡಳಿತ ಮಂಡಳಿ ಕೊನೆಗೆ ಪೊಲೀಸರನ್ನು ಕರೆಸಿಕೊಂಡು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿಸಿದ ಪ್ರಸಂಗ ನಡೆಯಿತು.

ಮಾ.15ರಿಂದ ಕಾಲೇಜಿನ ಮೂಲ ಸೌಕರ್ಯ ಕೊರತೆ, ಕಳಪೆ ಆಹಾರ ನೀಡಿಕೆ, ಬೌದ್ಧಿಕ ಗುಣಮಟ್ಟದ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದಾರೆ. ಗುರುವಾರ ಪಾಠ ಪ್ರವಚನಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಪ್ರತಿಭಟನೆ ನಿರತರಾಗಿದ್ದರು. ಮಾ.19ರೊಳಗೆ ಸೂಕ್ತ ವ್ಯವಸ್ಥೆ ಒದಗಿಸುವ ಬಗ್ಗೆ ಕಾಲೇಜು ಆಡಳಿತ ಮಂಡಳಿ ಭರವಸೆ ನೀಡಿತ್ತ್ತು. ಆದರೆ, ಗುರುವಾರ ವೆಲ್ ಫೇರ್ ಅಧಿಕಾರಿ ಅಬ್ದುಲ್ ರೆಹಮಾನ್ ಅವರನ್ನು ಅಮಾನತು ಮಾಡಿದ್ದು ಬಿಟ್ಟರೆ ಬೇರೆ ಕ್ರಮ ಜರುಗಿಸಿಲ್ಲ.

ಆದರೆ, ಪ್ರಿನ್ಸಿಪಾಲ್ ಅವರ ಅಮಾನತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಕಾಲೇಜಿನ ಮೇಲೆ ಕಲ್ಲುತೂರಾಟ ಮಾಡತೊಡಗಿದರು. ಕೊಣಾಜೆ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ವಿಡಿಯೋ ಚಿತ್ರೀಕರಣಕ್ಕೂ ವಿದ್ಯಾರ್ಥಿಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಕೆಎಸ್ಆರ್ ಪಿ ತುಕಡಿಯನ್ನು ಕರೆಸಿಕೊಂಡರೂ ಪರಿಸ್ಥಿತಿ ಮುಂದುವರೆದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಲಾಯಿತು.

ಘಟನಾ ಸ್ಥಳಕ್ಕೆ ಎಸಿಪಿ ಅವರು ಆಗಮಿಸಿ ಮಾತುಕತೆ ನಡೆಸಿದ ನಂತರ ಕಾಲೇಜು ಆಡಳಿತ ಮಂಡಳಿಯ ಆರ್ ಜೆ ಡಿಸೋಜಾ ಅವರು ವಿದ್ಯಾರ್ಥಿಗಳ ಪಾಲಿಗೆ ಮಾರಕವಾಗಿದ್ದ ಅಬ್ದುಲ್ ರೆಹಮಾನ್ ಅವರನ್ನು ಎಲ್ಲಾ ಹುದ್ದೆಗಳಿಂದ ಅಮಾನತು ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದರು. [ಚಿತ್ರಗಳು: ಐಸಾಕ್ ರಿಚರ್ಡ್, ಮಂಗಳೂರು]

ಮಂಗಳೂರು: ಪಿಎ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ಪಿಎ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಪಿಎ ಕಾಲೇಜಿನಲ್ಲಿ ಕಳೆದ ಐದಾರು ದಿನಗಳಿಂದ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಗುರುವಾರ ತಾರಕಕ್ಕೇರಿತ್ತು. ವಿದ್ಯಾರ್ಥಿಗಳ ಬೇಡಿಕೆಗೆ ಮಣಿದ ಕಾಲೇಜು ಆಡಳಿತ ಮಂಡಳಿ ಕೊನೆಗೆ ಪೊಲೀಸರನ್ನು ಕರೆಸಿಕೊಂಡು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿಸಿದ ಪ್ರಸಂಗ ನಡೆಯಿತು.

ಮೂಲ ಸೌಕರ್ಯ ಕೊರತೆ, ಕಳಪೆ ಆಹಾರ ನೀಡಿಕೆ,

ಮೂಲ ಸೌಕರ್ಯ ಕೊರತೆ, ಕಳಪೆ ಆಹಾರ ನೀಡಿಕೆ,

ಮಾ.15ರಿಂದ ಕಾಲೇಜಿನ ಮೂಲ ಸೌಕರ್ಯ ಕೊರತೆ, ಕಳಪೆ ಆಹಾರ ನೀಡಿಕೆ, ಬೌದ್ಧಿಕ ಗುಣಮಟ್ಟದ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದಾರೆ. ಗುರುವಾರ ಪಾಠ ಪ್ರವಚನಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಪ್ರತಿಭಟನೆ ನಿರತರಾಗಿದ್ದರು.

ವೆಲ್ ಫೇರ್ ಅಧಿಕಾರಿ ಅಮಾನತು

ವೆಲ್ ಫೇರ್ ಅಧಿಕಾರಿ ಅಮಾನತು

ಮಾ.19ರೊಳಗೆ ಸೂಕ್ತ ವ್ಯವಸ್ಥೆ ಒದಗಿಸುವ ಬಗ್ಗೆ ಕಾಲೇಜು ಆಡಳಿತ ಮಂಡಳಿ ಭರವಸೆ ನೀಡಿತ್ತ್ತು. ಆದರೆ, ಗುರುವಾರ ವೆಲ್ ಫೇರ್ ಅಧಿಕಾರಿ ಅಬ್ದುಲ್ ರೆಹಮಾನ್ ಅವರನ್ನು ಅಮಾನತು ಮಾಡಿದ್ದು ಬಿಟ್ಟರೆ ಬೇರೆ ಕ್ರಮ ಜರುಗಿಸಿಲ್ಲ.

ಪ್ರಿನ್ಸಿಪಾಲ್ ಅವರ ಅಮಾನತಿಗೆ ಆಗ್ರಹಿಸಿ

ಪ್ರಿನ್ಸಿಪಾಲ್ ಅವರ ಅಮಾನತಿಗೆ ಆಗ್ರಹಿಸಿ

ಪ್ರಿನ್ಸಿಪಾಲ್ ಅವರ ಅಮಾನತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಕಾಲೇಜಿನ ಮೇಲೆ ಕಲ್ಲುತೂರಾಟ ಮಾಡತೊಡಗಿದರು. ಕೊಣಾಜೆ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.

ವಿಡಿಯೋ ಚಿತ್ರೀಕರಣಕ್ಕೂ ಅಡ್ಡಿ

ವಿಡಿಯೋ ಚಿತ್ರೀಕರಣಕ್ಕೂ ಅಡ್ಡಿ

ವಿಡಿಯೋ ಚಿತ್ರೀಕರಣಕ್ಕೂ ವಿದ್ಯಾರ್ಥಿಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಕೆಎಸ್ಆರ್ ಪಿ ತುಕಡಿಯನ್ನು ಕರೆಸಿಕೊಂಡರೂ ಪರಿಸ್ಥಿತಿ ಮುಂದುವರೆದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಲಾಯಿತು.

ಆಡಳಿತ ಮಂಡಳಿಯ ಡಿಸೋಜಾ ಪ್ರಕಟಣೆ

ಆಡಳಿತ ಮಂಡಳಿಯ ಡಿಸೋಜಾ ಪ್ರಕಟಣೆ

ಘಟನಾ ಸ್ಥಳಕ್ಕೆ ಎಸಿಪಿ ಅವರು ಆಗಮಿಸಿ ಮಾತುಕತೆ ನಡೆಸಿದ ನಂತರ ಕಾಲೇಜು ಆಡಳಿತ ಮಂಡಳಿಯ ಆರ್ ಜೆ ಡಿಸೋಜಾ ಅವರು ವಿದ್ಯಾರ್ಥಿಗಳ ಪಾಲಿಗೆ ಮಾರಕವಾಗಿದ್ದ ಅಬ್ದುಲ್ ರೆಹಮಾನ್ ಅವರನ್ನು ಎಲ್ಲಾ ಹುದ್ದೆಗಳಿಂದ ಅಮಾನತು ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದರು.

ಚಿತ್ರಗಳು: ಐಸಾಕ್ ರಿಚರ್ಡ್, ಮಂಗಳೂರು

English summary
The agitation by the students of PA College against the management on Thursday March 20 turned violent and the police had to resort to lathi charge to disperse the protesters. The college dismissed Abdul Rehman, the student welfare officer in response to the agitation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X