ದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನ
ಮಂಗಳೂರು, ಜನವರಿ 03: ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಾಲ್ವರು ಯುವಕರನ್ನು ಮಂಗಳೂರು ನಗರ ಪೊಲೀಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಶಂಕಿತ ಆರೋಪಿಗಳಿದ್ದ ಕಾರನ್ನು ಸುರತ್ಕಲ್ ಬಳಿಯಿಂದ ಬೆನ್ನಟ್ಟಿದ್ದ ಪೊಲೀಸರು ಮಂಗಳೂರು- ಮೂಡುಬಿದಿರೆ ಹೆದ್ದಾರಿಯಲ್ಲಿರುವ ಮಿಜಾರು ಬಳಿ ಗುಂಡು ಹಾರಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಮಧ್ಯಾಹ್ನ 1.30ಕ್ಕೆ ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆ ನಡೆದಿತ್ತು. ಕೆಲವೇ ಸಮಯದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರೇ ಕೊಲೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬ ಆರೋಪಿಯ ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ನಾಲ್ವರನ್ನು ಪೊಲೀಸ್ ಆಯುಕ್ತರ ಕಚೇರಿಗೆ ಪೊಲೀಸರು ಕರೆತರುತ್ತಿದ್ದಾರೆ.












Click it and Unblock the Notifications