ಮಂಗಳೂರು: ರೌಡಿಶೀಟರ್ ಗುರು ಸಹೋದರನ ಹತ್ಯೆ
ಮಂಗಳೂರು, ಜು.11: ನಗರದ ವಾಮಂಜೂರು ಮೂಡುಶೆಡ್ಡೆ ನಿವಾಸಿಯಾಗಿದ್ದ ವ್ಯಕ್ತಿಯೊಬ್ಬನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾದ ಘಟನೆ ಶುಭೋದಯ ಶಾಲಾ ಬಳಿ ನಡೆದಿದೆ.
ಕೊಲೆಯಾದ ಯುವಕನನ್ನು ಭರತ್ (26) ಎಂದು ಗುರುತಿಸಲಾಗಿದ್ದು, ಘಟನೆ ಶುಕ್ರವಾರ ಸಂಜೆ 4.30ರ ವೇಳೆ ನಡೆದಿದೆ. ಸಂಜೆ ಸ್ನೇಹಿತನ ಮನೆಗೆ ಬರುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕಿನಲ್ಲಿ ಬಂದು ಭರತ್‌ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ಘಟನೆಯ ಸಂಬಂಧ ಕಾವೂರು ಪೊಲೀಸರು ಮಾಹಿತಿ ಪಡೆದಿದ್ದು, ಪ್ರಕರಣ ದಾಖಲಿಸಲಿದ್ದಾರೆ.












Click it and Unblock the Notifications