ಮಂಗಳೂರು : ಬಾಲಕೃಷ್ಣ ಶಿಬಾರ್ಲ ಅವರಿಗೆ ಪ.ಗೋ ಪ್ರಶಸ್ತಿ
ಮಂಗಳೂರು, ಏ. 1 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ವಿಜಯಕರ್ನಾಟಕ ಪತ್ರಿಕೆಯ ಉಡುಪಿಯ ವರದಿಗಾರ ಬಾಲಕೃಷ್ಣ ಶಿಬಾರ್ಲ ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಿರಿಯ ಪತ್ರಕರ್ತ ದಿ.ಪದ್ಯಾಣ ಗೋಪಾಲಕೃಷ್ಣ ಭಟ್ ಸ್ಮರಣಾರ್ಥ ಪ.ಗೋ.ಪ್ರಶಸ್ತಿಯನ್ನು ವಾರ್ಷಿಕವಾಗಿ ನೀಡುತ್ತದೆ. 2014ನೇ ಸಾಲಿನ ಪ್ರಶಸ್ತಿಗಾಗಿ ಬಾಲಕೃಷ್ಣ ಶಿಬಾರ್ಲ ಅವರನ್ನು ಆಯ್ಕೆ ಮಾಡಲಾಗಿದೆ.

2014ರ ಜುಲೈ 31 ರಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ಬಾಲಕೃಷ್ಣ ಶಿಬಾರ್ಲ ಅವರ 'ನಕ್ಸಲ್, ಪೊಲೀಸ್ ಮಧ್ಯೆ ನಲುಗಿದವರು' ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಏಪ್ರಿಲ್ 7ರಂದು ಬೆಳಗ್ಗೆ 10.45ಕ್ಕೆ ಮಂಗಳೂರು ಪತ್ರಿಕಾ ಭವನದ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. [ಮಂಗಳೂರು : ಅಕ್ರಮ ಜಾಹೀರಾತುಗಳ ಎತ್ತಂಗಡಿ]
ಈ ಪ್ರಶಸ್ತಿಯು 10,001 ರೂ.ನಗದು ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ.ಪದ್ಯಾಣ ಗೋಪಾಲಕೃಷ್ಣ ಭಟ್ ಸ್ಮರಣಾರ್ಥ ನೀಡಲಾಗುವ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನು 2013ರಲ್ಲಿ ಹೊಸ ದಿಗಂತ ದೈನಿಕದ ವರದಿಗಾರ ಸುರೇಶ್ ಡಿ.ಪಳ್ಳಿ ಅವರಿಗೆ ನೀಡಲಾಗಿತ್ತು.












Click it and Unblock the Notifications