35 ಲಕ್ಷದ ಮೌಲ್ಯದ ಹೈಡ್ರೋವೀಡ್ ಗಾಂಜಾ ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಂಧನ

ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕ ವಸ್ತುಗಳ ಜಾಲ ಹರಡುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಇದೀಗ ಲಕ್ಷಾಂತರ ರೂಪಾಯಿ ಮೌಲ್ಯದ ಹೈಡ್ರೋ ವೀಡ್ (Hydro Weed) ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಮಂಗಳೂರು ಹಾಗೂ ಸುತ್ತಮುತ್ತಲ ಶೈಕ್ಷಣಿಕ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ.

ಬಂಧಿತ ಆರೋಪಿತೆಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯೆಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ (BCA) ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

Mangaluru

ಕಾರ್ಯಾಚರಣೆಯ ವಿವರ

ಮಂಗಳವಾರ (ಮೇ 12) ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಮೂಲ್ಕಿ ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆಕೆಯ ಬಳಿಯಿದ್ದ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ, ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 42 ಗ್ರಾಂ ತೂಕದ ಹೈಡ್ರೋ ವೀಡ್ ಗಾಂಜಾ ಪತ್ತೆಯಾಗಿದೆ. ಗಾಂಜಾದ ಜೊತೆಗೆ ಒಂದು ಮೊಬೈಲ್ ಫೋನ್ ಹಾಗೂ ಡ್ರಗ್ಸ್ ಸಾಗಾಟಕ್ಕೆ ಬಳಸುತ್ತಿದ್ದ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಈ ವಿದ್ಯಾರ್ಥಿನಿ ಈ ಹೈಡ್ರೋ ವೀಡ್ ಅನ್ನು ತಮಿಳುನಾಡಿನ ಚೆನ್ನೈಯಿಂದ ತರಿಸಿಕೊಳ್ಳುತ್ತಿದ್ದಳು. ಸುಲಭವಾಗಿ ಹಣ ಸಂಪಾದಿಸುವ ಆಸೆಗೆ ಬಿದ್ದು, ಚೆನ್ನೈಯಿಂದ ಮಾದಕ ವಸ್ತುಗಳನ್ನು ರೈಲು ಅಥವಾ ಬಸ್ ಮೂಲಕ ಸಾಗಿಸಿ ಕರಾವಳಿ ಭಾಗದ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದಳು ಎನ್ನಲಾಗಿದೆ.

ಹಳೆ ಕ್ರಿಮಿನಲ್ ಕೇಸ್‌ ಹಿನ್ನೆಲೆ

ಬಂಧಿತ ವಿದ್ಯಾರ್ಥಿನಿಯ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಶಾಕಿಂಗ್ ವಿಷಯವೊಂದು ತಿಳಿದುಬಂದಿದೆ. ಈಕೆಯ ವಿರುದ್ಧ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಹಾಗೂ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದಲ್ಲಿ ಈಗಾಗಲೇ ಮಾದಕ ವಸ್ತು ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಪದೇ ಪದೇ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಈಕೆ ಕೇವಲ ಮಧ್ಯವರ್ತಿಯಲ್ಲ, ಬದಲಾಗಿ ಮಾದಕ ವಸ್ತು ಸಾಗಾಟ ಜಾಲದ ಪ್ರಮುಖ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದಾಳೆ ಎಂಬ ಸಂಶಯಕ್ಕೆ ಪುಷ್ಟಿ ನೀಡಿದೆ.

ಪಣಂಬೂರು ಎಸಿಪಿ ನೇತೃತ್ವದ ತಂಡ ಹಾಗೂ ಮೂಲ್ಕಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಸದ್ಯ ಆರೋಪಿತೆಯ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಈ ಹಗರಣದ ಮೂಲ ಎಲ್ಲಿದೆ ಮತ್ತು ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಯುವಜನತೆ ಇಂತಹ ಮಾದಕ ಜಾಲಕ್ಕೆ ಬಲಿಯಾಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+