ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆದಿತ್ಯರಾವ್ ಶರಣು; ಮಂಗಳೂರು ಪೊಲೀಸರು ಹೇಳಿದ್ದೇನು?

|
Google Oneindia Kannada News

Recommended Video

ಟ್ವೀಟ್ ಮಾಡಿದ ಮಂಗಳೂರು ಕಮಿಷನರ್ | Mangalore | Airport | Explosion | Oneindia kannada

ಮಂಗಳೂರು, ಜನವರಿ 22 : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಲಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಪಿ. ಎಸ್. ಹರ್ಷ ಈ ಕುರಿತು ಟ್ವೀಟ್ ಮಾಡಿದ್ದಾರೆ. ಬಾಂಬ್ ಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡ ಬೆಂಗಳೂರಿಗೆ ತೆರಳಲಿದೆ. ತಂಡ ಆರೋಪಿಯನ್ನು ವಿಚಾರಣೆ ನಡೆಸಲಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಮಂಗಳೂರು ಬಾಂಬ್ ಪ್ರಕರಣ: ಸ್ವತಃ ಶರಣಾದ ಶಂಕಿತ ಆರೋಪಿಮಂಗಳೂರು ಬಾಂಬ್ ಪ್ರಕರಣ: ಸ್ವತಃ ಶರಣಾದ ಶಂಕಿತ ಆರೋಪಿ

ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿ ಡಿಜಿ&ಐಜಿಪಿ ನೀಲಮಣಿ ಎನ್. ರಾಜು ಮುಂದೆ ಬಾಂಬ್ ಇಟ್ಟಿದ್ದ ಆರೋಪಿ ಮಣಿಪಾಲ ಮೂಲದ ಆದಿತ್ಯರಾವ್ ಶರಣಾಗಿದ್ದ. ತಕ್ಷಣ ಅವನನ್ನು ಹಲಸೂರು ಗೇಟ್ ಪೊಲೀಸರಿಗೆ ಒಪ್ಪಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ವ್ಯಕ್ತಿ ಗುರುತು ಪತ್ತೆ?ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ವ್ಯಕ್ತಿ ಗುರುತು ಪತ್ತೆ?

Bomb Case

ಆರೋಪಿ ಸದ್ಯ ಬೆಂಗಳೂರು ಪೊಲೀಸರ ವಶದಲ್ಲಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಕರೆದುಕೊಂಡು ಹೋಗಲಾಗುತ್ತಿದೆ. ಬಳಿಕ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಬಳಿಕ ಮಂಗಳೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲಿದ್ದಾರೆ.

ಕುಮಾರಸ್ವಾಮಿ ಭೇಟಿ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಟ್ವೀಟ್‌ಕುಮಾರಸ್ವಾಮಿ ಭೇಟಿ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಟ್ವೀಟ್‌

ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಬಳಿ ಬಾಂಬ್ ಪತ್ತೆಯಾಗಿತ್ತು. ಸಂಜೆ ಅದನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣದ ತನಿಖೆಗೆ ಮಂಗಳೂರು ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ದರು.

English summary
In a tweet Mangaluru police commissioner P.S.Harsha said that Mangaluru city police investigation team is flying into Bengaluru shortly to investigate the developments in connection with bomb in airport case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X