• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣ ಅಭಿವೃದ್ದಿ

|

ಮಂಗಳೂರು, ನವೆಂಬರ್ 09: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲು ಗುತ್ತಿಗೆ ಆಧಾರದಲ್ಲಿ ಖಾಸಗಿ ಸಂಸ್ಥೆಗಳಿಗೆ ವಹಿಸಿಕೊಡಲು ತೀರ್ಮಾನಿಸಲಾಗಿದೆ. ದೆಹಲಿಯಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಈ ನಿರ್ಧಾರ ಕೈಗೊಂಡಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರು ಚಾಲಕರ ಬೀದಿ ಕಾಳಗ

ಉತ್ತರ ಪ್ರದೇಶದ ಲಕ್ನೋ, ಅಹ್ಮದಾಬಾದ್ , ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹತಿ ವಿಮಾನ ನಿಲ್ದಾಣಗಳನ್ನು ಪಿಪಿಪಿ ಆಧಾರದಲ್ಲಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರು, ಮುಂಬಯಿ, ಹೈದರಾ ಬಾದ್‌ ಹಾಗೂ ದಿಲ್ಲಿ ನಿಲ್ದಾಣಗಳು ಪಿಪಿಪಿ ಅಡಿಯಲ್ಲಿ ವಿಶ್ವದರ್ಜೆಯ ಸೌಲಭ್ಯ ಪಡೆದಿದೆ. ಅದಲ್ಲದೇ ಈ ನಿಲ್ದಾಣಗಳು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲಾಭ ತಂದು ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು, ಜೈಪುರ, ಅಹಮದಾಬಾದ್‌, ಲಕ್ನೋ, ಗುವಾಹಾಟಿ, ತಿರುವನಂತಪುರ ನಿಲ್ದಾಣಗಳನ್ನೂ ಇದೇ ರೀತಿ ಅಭಿವೃದ್ಧಿಗೊಳಿಸಲು ತೀರ್ಮಾನಿಸಲಾಗಿದೆ.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ, ಸರ್ಕಾರದಿಂದ 300 ಎಕರೆ ಭೂಮಿ

2006ರಲ್ಲಿ ದಿಲ್ಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳನ್ನುಸರಕಾರಿ ಮತ್ತು ಖಾಸಗಿ ಸಹಭಾಗಿತ್ವದ ಪಿಪಿಪಿ ಯೋಜನೆಯಡಿಯಲ್ಲಿ ಆಧುನೀಕರಣಗೊಳಿಸುವ ಉದ್ದೇಶಕ್ಕಾಗಿ ಖಾಸಗಿ ವಲಯಕ್ಕೆ ನೀಡಿದ ಬಳಿಕ ಈ ಎರಡೂ ನಿಲ್ದಾಣಗಳು ನಿರೀಕ್ಷೆಗೂ ಮೀರಿ ಅಭಿವೃದ್ಧಿಯನ್ನು ಸಾಧಿಸಿದೆ. ಹೀಗಾಗಿ ಮತ್ತೆ 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

English summary
Central government approved for leasing Mangaluru and other 5 Airports for development through PPP model on November 08.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X