ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : ವಿಮಾನ ನಿಲ್ದಾಣಕ್ಕೆ ಎರಡು ಏರೋ ಬ್ರಿಡ್ಜ್

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಜ. 6 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿಯಾಗಿ ಎರಡು ಏರೋ ಬ್ರಿಡ್ಜ್ ಹಾಗೂ ಎರಡು ವಿಮಾನ ಪಾರ್ಕಿಂಗ್ ಯೋಜನೆಯ ಕಾಮಗಾರಿಯನ್ನು ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುಮಾರು 8 ಕೋಟಿ ರೂ.ಗಳ ಈ ಯೋಜನೆಗೆ 2016 ಮಾರ್ಚ್ ತಿಂಗಳೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ನಾಗರಿಕ ವಿಮಾನ ಯಾನ ನಿರ್ದೇಶನಾಲಯ ಸುಮಾರು 8 ಕೋಟಿ ರೂ.ಗಳ ಕಾಮಗಾರಿಗೆ ಅನುಮತಿ ನೀಡಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರಾದ ಜೆ.ಟಿ. ರಾಧಾಕೃಷ್ಣ ಅವರು ಹೇಳಿದ್ದಾರೆ. [ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಕಿರೀಟ]

Mangaluru

ಪ್ರಸ್ತುತ ಮಂಗಳೂರು ನೂತನ ವಿಮಾನ ನಿಲ್ದಾಣದಲ್ಲಿ ಏಕಕಾಲಕ್ಕೆ 6 ವಿಮಾನಗಳು ಹಾಗೂ ಹಳೆಯ ನಿಲ್ದಾಣದಲ್ಲಿ 3 ವಿಮಾನಗಳ ನಿಲುಗಡೆಗೆ ಅವಕಾಶವಿದೆ. ಹೆಚ್ಚುವರಿಯಾಗಿ ಎರಡು ವಿಮಾನಗಳ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಬೇಕಾಗಿದೆ. [ಶಿರಾಡಿ ಬಂದ್, ಚಾರ್ಮಾಡಿಯಲ್ಲಿ ಟ್ರಾಫಿಕ್ ಜಾಮ್]

ಒಂದು ಪಾರ್ಕಿಂಗ್ ಯಾರ್ಡ್ ನಿರ್ಮಾಣಕ್ಕೆ ತಲಾ 2 ಕೋಟಿ ರೂ.ಗಳ ಅವಶ್ಯಕತೆ ಇದೆ. ಒಟ್ಟು 4ಕೋಟಿ ರೂ.ಗಳ ಯೋಜನೆ ಇದಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಒಳಗಡೆ ಇದರ ನಿರ್ಮಾಣ ಕಾರ್ಯ ನಡೆಯಲಿದೆ.

ಕೆಂಜಾರಿನ ನೂತನ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಪ್ರಯಾಣಿಕರು ನೇರವಾಗಿ ಟರ್ಮಿನಲ್ ಕಟ್ಟಡಕ್ಕೆ ಬರುವ ಹವಾನಿಯಂತ್ರಿತ ಏರೋ ಬ್ರಿಡ್ಜ್ ವ್ಯವಸ್ಥೆಯನ್ನು ಈಗಾಗಲೇ ಅಳವಡಿಸಲಾಗಿದೆ. ಮಂಗಳೂರಿನಲ್ಲಿ ಏರ್ ಟ್ರಾಫಿಕ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನು ಎರಡು ಏರೋ ಬ್ರಿಡ್ಜ್‌ನ ಆವಶ್ಯಕತೆ ಇದ್ದು, ಇದಕ್ಕಾಗಿ ಬೇಡಿಕೆ ಸಲ್ಲಿಸಲಾಗಿತ್ತು,

ಮಂಗಳೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾನ್ಯತೆ ಸಿಕ್ಕಿದ ನಂತರ ಎರಡು ವಿಮಾನಗಳ ಪಾರ್ಕಿಂಗ್ ವ್ಯವಸ್ಥೆ ಹಾಗೂ ಎರಡು ಏರೋ ಬ್ರಿಡ್ಜ್‌ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿತ್ತು. ಇದಕ್ಕೆ ಒಪ್ಪಿಗೆ ದೊರೆತಿದ್ದು, ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಜೆ.ಟಿ.ರಾಧಾಕೃಷ್ಣ ಅವರು ತಿಳಿಸಿದ್ದಾರೆ.

English summary
The Airports Authority of India (AAI) has sanctioned two more air bridge and parking bays at Mangaluru International Airport said Director of the airport J.T. Radhakrishna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X