Mangaluru airport: ಮಂಗಳೂರು ವಿಮಾನ ನಿಲ್ದಾಣದಲ್ಲಿ ₹98.68 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ
ಮಂಗಳೂರು, ಜನವರಿ, 09: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ 98.68 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುದದ್ವಾರದಲ್ಲಿ ಬಚ್ಚಿಟ್ಟು ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 98.68 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅಕ್ರಮವಾಗಿ ಸಾಗಾಟಕ್ಕೆ ಯತ್ನಸಿದ್ದನಂತೆ ಆರೋಪಿ.

ಚಿನ್ನದ ಪೇಸ್ಟ್ ಅನ್ನು ಕ್ಯಾಪ್ಸೂಲ್‌ಗಳಲ್ಲಿ ತುಂಬಿಸಿಟ್ಟು ಗುದದ್ವಾರದಲ್ಲಿ ಅಡಗಿಸಿ ಸಾಗಾಟ ಮಾಡಲು ಯತ್ನಿಸಿದ್ದ ದುಬೈನಿಂದ ಬಂದ ಪ್ರಯಾಣಿಕನ ವರ್ತನೆಯನ್ನು ಗಮನಿಸಿ ಅನುಮಾನಗೊಂಡಿದ್ದ ಕಸ್ಟಮ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳಿಕ ಆತನನ್ನು ವಶಕ್ಕೆ ಪಡೆದು ಶೋಧ ನಡೆಸಿದಾಗ ಅಕ್ರಮ ಚಿನ್ನ ಸಾಗಾಟದ ಅಸಲಿ ಸತ್ಯ ಬಯಲಾಗಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್‌ನಲ್ಲಿ ಅಬುಧಾಬಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ಬಳಿ ಈ ಬೃಹತ್ ಪ್ರಮಾಣದ ಅಕ್ರಮ ಚಿನ್ನ ಸಿಕ್ಕಿದೆ. ಇದು 24 ಕ್ಯಾರೆಟ್ ಶುದ್ಧತೆಯ ಚಿನ್ನವಾಗಿದ್ದು, ಇದು 1,579 ಗ್ರಾಂ ತೂಕ ಹೊಂದಿದೆ. ಇದರ ಮೌಲ್ಯ ಸುಮಾರು 98.68 ಲಕ್ಷ ರೂಪಾಯಿ ಆಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications