• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಕ್ಷಣಗಣನೆ

|

ಮಂಗಳೂರು ಎಪ್ರಿಲ್13: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿಯ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮೋದಿ ಮೇನಿಯಾ ಆರಂಭವಾಗಿದೆ. ಮೋದಿ ಅವರ ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆ ಪೂರ್ಣಗೊಂಡಿದ್ದು, ಮೋದಿ ಅವರ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ ಗೊಂಡಿದೆ.

ಶನಿವಾರ ಕರ್ನಾಟಕದಲ್ಲಿ ಮೋದಿ, ರಾಹುಲ್ ಪ್ರಚಾರ

ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಕೇಸರಿ ಪಾಳಯದಲ್ಲಿ ಸಂಚಲನ ಮೂಡಿದ್ದು,ಚುನಾವಣಾ ರಣೋತ್ಸಾಹ ಇಮ್ಮಡಿಯಾಗಿದೆ. 5 ಕೆಎಸ್‌ಆರ್‌ಪಿ ತುಕಡಿ, 19 ಸಿ ಎ ಆರ್‌ ತುಕಡಿ ಮತ್ತು 2 ಸಿ ಆರ್‌ ಪಿ ಎಫ್‌ ತುಕಡಿಗಳ ಅಧಿಕಾರಿ ಮತ್ತು ಸಿಬಂದಿ, 4 ಎ ಎಸ್‌ ಸಿ ತಂಡ, 1 ಬಿಡಿಎಸ್‌ ತಂಡ, 30 ಡಿಎಫ್‌ಎಂಡಿ ಎಚ್‌ಎಚ್‌ಎಂಡಿಯನ್ನು ಬಂದೋಬಸ್ತು ಕರ್ತವ್ಯದಲ್ಲಿ ಒಟ್ಟು 34 ಸೆಕ್ಟರ್‌ ಮೊಬೈಲ್‌ಗ‌ಳು ಹಾಗೂ 144 ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್‌ ಪಾಯಿಂಟ್‌ಗಳು ಕಾರ್ಯ ನಿರ್ವಹಿಸಲಿವೆ. ನಗರದ ಆಯಕಟ್ಟಿನ ಪ್ರದೇಶದಲ್ಲಿ ಸಿಸಿ ಕೆಮರಾ ಅಳವಡಿಸಲಾಗಿದೆ. ಹೊಟೇಲ್‌ ಲಾಡ್ಜ್ ಗಳನ್ನು ತಪಾಸಣೆ ಮಾಡಲಾಗಿದೆ.

ಮಂಗಳೂರಿನ ಕೇಂದ್ರ ಮೈದಾನದಲ್ಲಿ ಸಮಾವೇಶ

ಮಂಗಳೂರಿನ ಕೇಂದ್ರ ಮೈದಾನದಲ್ಲಿ ಸಮಾವೇಶ

ಪ್ರಧಾನಿ ನರೇಂದ್ರ ಮೋದಿ,ಸಂಜೆ 4 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನ ದಲ್ಲಿ ಬೃಹತ್ ಸಭೆ ನಡೆಸಲಿದ್ದಾರೆ.ನಾಳೆ ಮಧ್ಯಾಹ್ನ 2.45 ಕ್ಕೆ ಮುಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ಮೋದಿ,ಸಂಜೆ 4 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ‌ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಬಳಿಕ ರಸ್ತೆ ಮಾರ್ಗದ ಮೂಲಕ ನಗರದ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೋದಿ ಭಾಗವಹಿಸಲಿರುವ ಬೃಹತ್ ಸಭೆಯನ್ನು ಐತಿಹಾಸಿಕವಾಗಿ ನಡೆಸಲು ಬಿಜೆಪಿ ಪ್ಲಾನ್ ಮಾಡಿದ್ದು ದಾಖಲೆ ಸಂಖ್ಯೆಯಲ್ಲಿ ಜನ ಸೇರಿಸಲು ಸಿದ್ದತೆ ಮಾಡಿಕೊಂಡಿದೆ.

ಒಂದು ಲಕ್ಷಕ್ಕೂ ಹೆಚ್ಚು ಮಂದಿ ನಿರೀಕ್ಷೆ

ಒಂದು ಲಕ್ಷಕ್ಕೂ ಹೆಚ್ಚು ಮಂದಿ ನಿರೀಕ್ಷೆ

ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 1ಲಕ್ಷಕ್ಕೂ ಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ನರೇಂದ್ರ ಮೋದಿಯವರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ.

ದೇವೇಗೌಡರ ಮಾತು ನಂಬುತ್ತೀರಾ? ಕೊಪ್ಪಳದಲ್ಲಿ ಮೋದಿ ಪ್ರಶ್ನೆ

ವಾಹನ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ

ವಾಹನ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ

ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ವಾಹನ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇಂದು ಬೆಳಗ್ಗೆ 8ರಿಂದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ನಿರ್ಗಮಿಸುವ ವರೆಗೆ ಬಜ್ಪೆ ವಿಮಾನ ನಿಲ್ದಾಣದಿಂದ ನಗರದ ನೆಹರೂ ಮೈದಾನದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದೇರೀತಿ ಪ್ರಧಾನಿ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನಗಳಿಗೆ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಂಗಳೂರಿನಲ್ಲಿ ಫ್ಲಾಷ್ ಮಾಬ್

ವಾಹನಗಳ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಟು

ವಾಹನಗಳ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಟು

ಪ್ರಧಾನಿ ಮೋದಿ ಅವರು ನಗರಕ್ಕಾಗಮಿಸುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆಯನ್ನು ಗಮನಿಸಿಕೊಂಡು ನಗರದೊಳಗೆ ಪ್ರವೇಶವಾಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗುತ್ತದೆ. ಸಿಟಿ ಬಸ್‌ಗಳು, ಸರ್ವಿಸ್‌ ಬಸ್‌ಗಳು, ಅಂತರ್‌ ಜಿಲ್ಲಾ ಬಸ್‌ಗಳು ಇಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 7ರ ವರೆಗೆ ಡ್ರಾಪಿಂಗ್‌ ಪಾಯಿಂಟ್‌ಗಳಾದ ಜ್ಯೋತಿ, ಮಂಗಳಾದೇವಿ ಮತ್ತು ನವಭಾರತ ಸರ್ಕಲ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ವಾಪಸ್‌ ಹೋಗಲಿವೆ. ಕೆಎಸ್ಸಾರ್ಟಿಸಿ ಬಸ್‌ಗಳು ಪಂಪ್‌ವೆಲ್‌- ನಂತೂರು- ಕೆಪಿಟಿ- ಕುಂಟಿಕಾನ ಮೂಲಕ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ, ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಿಂದ ಹೊರಡುವ ಬಸ್‌ಗಳು ಅದೇ ಮಾರ್ಗದಲ್ಲಿ ವಾಪಸ್‌ ಹೋಗಲಿವೆ.

ಮೋದಿ ಆಗಮನ: ಕರಾವಳಿ ಬಿಜೆಪಿ ನಾಯಕರಲ್ಲಿ ಹೆಚ್ಚಿದ ರಣೋತ್ಸಾಹ

ಮೋದಿ ಸಮಾವೇಶಕ್ಕೆ 1472 ಪೊಲೀಸರ ನಿಯೋಜನೆ

ಮೋದಿ ಸಮಾವೇಶಕ್ಕೆ 1472 ಪೊಲೀಸರ ನಿಯೋಜನೆ

ಮೋದಿ ಅವರು ಭಾಗವಹಿಸುವ ಕಾರ್ಯಕ್ರದ ಭದ್ರತೆಗೆ 1472 ಪೊಲೀಸರ ನಿಯೋಜನೆಗೆ ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ. ಇದರಲ್ಲಿ 5 ಎಸ್‌ಪಿ , 10 ಡಿವೈಎಸ್‌ಪಿ, 36 ಇನ್ಸ್ ಪೆಕ್ಟರ್ , 67 ಪಎಸ್‌ಐ, 147 ಎಎಸ್‌ಐ , 1207 ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು 1,472 ಪೊಲೀಸರನ್ನು ಭಧ್ರತೆಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

ಎಂಥ ಸಂಸದರನ್ನೂ ದುಡಿಸಿಕೊಳ್ಳುವ ಸಾಮರ್ಥ್ಯ ಮೋದಿಗಿದೆ: ಚಕ್ರವರ್ತಿ ಸೂಲಿಬೆಲೆ

English summary
PM Narendra Modi going to visit mangaluru today . Modi addressing huge election campaign rally in Mangaluru. Mangaluru city is all set for Modi's election rally. All preparation completed for this mega rally .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X