ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ಯಾರ್ ಚಂಡಮಾರುತ; ಅಸ್ತವ್ಯಸ್ತಗೊಂಡ ಮಂಗಳೂರು, ಉಡುಪಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 25: ಕ್ಯಾರ್ ಚಂಡಮಾರುತದ ಪರಿಣಾಮ ಅರಬ್ಬೀ ಸಮುದ್ರದಲ್ಲಿ ಗಾಳಿ, ಅಲೆಗಳ ಅಬ್ಬರ ಜೋರಾಗಿದ್ದು ದಕ್ಷಿಣ ಕನ್ನಡ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನ ಉಚ್ಚಿಲ, ಸೋಮೇಶ್ವರ ಸಮೀಪ ಕಡಲ್ಕೊರೆತ ತೀವ್ರಗೊಂಡಿದ್ದು ಸ್ಥಳೀಯರಲ್ಲಿ ಆತಂಕ ತಂದಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ತೀವ್ರ ಗಾಳಿ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳಿಂದಲೂ ದಕ್ಷಿಣ ಕನ್ನಡದಲ್ಲಿ ಹಿಂಗಾರು ಅಬ್ಬರ ತೀವ್ರಗೊಂಡಿದ್ದು ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ರಾಜ್ಯದಲ್ಲಿ ಅಬ್ಬರಿಸಲಿದೆ 'ಕ್ಯಾರ್' ಚಂಡಮಾರುತರಾಜ್ಯದಲ್ಲಿ ಅಬ್ಬರಿಸಲಿದೆ 'ಕ್ಯಾರ್' ಚಂಡಮಾರುತ

ಇಂದು ಮಳೆಯ ರಭಸಕ್ಕೆ ಉಳ್ಳಾಲದ ಕಿಲ್ಲೇರಿಯಾ ನಗರದ ಬಳಿ ತಡೆಗೋಡೆ ಸಮುದ್ರ ಪಾಲಾಗಿದೆ. ಮಾತ್ರವಲ್ಲ ಕಡಲ ಬದಿಯ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಸಹಜವಾಗಿಯೇ ತೀರವಾಸಿಗಳು ಆತಂಕಗೊಂಡಿದ್ದಾರೆ. ರಾತ್ರಿ ಇಡೀ ಮಳೆ ಸುರಿದ ಪರಿಣಾಮ ಹಲವೆಡೆ ವಿದ್ಯುತ್ ಸಂಪರ್ಕ ಕೈ ಕೊಟ್ಟಿದ್ದು ಜನರು ಪರದಾಡುವಂತಾಗಿದೆ.

Mangaluru And Udupi Disrupted By Kyarr Cyclone

ಉಡುಪಿಯಲ್ಲೂ ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ವಿಸ್ತರಿಸಿದೆ. ಜನ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಮಹಾರಾಷ್ಟ್ರದ ಕೊಂಕಣ ಮತ್ತು ಗೋವಾ ತೀರ ಪ್ರದೇಶಗಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ

ಕ್ಯಾರ್ ಚಂಡಮಾರುತ ಗಾಳಿ ಮಳೆ ಹೊತ್ತು ತರುತ್ತಿದೆ. ಈ ಕುರಿತು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಗುರುವಾರದಿಂದಲೇ ಉಡುಪಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದ್ದು, ಸಮುದ್ರದಲ್ಲಿ ಅಲೆಗಳು ಅಬ್ಬರಿಸುತ್ತಿವೆ. ಕಾಪು, ಪಡುಕೆರೆ ಸಹಿತ ಹಲವೆಡೆ ಸಮುದ್ರ ಕೊರೆತ ಉಂಟಾಗಿದೆ.

English summary
The impact of kyarr cyclone has disrupted dakshina kannada and udupi districts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X