ಬಂಧನ ಭೀತಿಯಲ್ಲಿದ್ದ 5 ಹಿಂದು ಮುಖಂಡರಿಗೆ ನಿರೀಕ್ಷಣಾ ಜಾಮೀನು

ಮಂಗಳೂರು, ಜುಲೈ 11 : ರಾಷ್ಟ್ರೀಯ ಸ್ವಯಂಸೇವಾ ಸಂಘ (ಆರ್ಎಸ್ಎಸ್) ದ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ವೇಳೆ ಗಲಭೆ ಸೃಷ್ಠಿಸಿದ ಆರೋಪದ ಮೇಲೆ ಬಂಧನ ಭೀತಿಯಲ್ಲಿದ್ದ ಐವರು ಹಿಂದು ಸಂಘಟನೆಯ ನಾಯಕರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ಮಂಗಳೂರಿನ ಎರಡನೇ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಐವರು ಹಿಂದು ನಾಯಕರ ಮೇಲೆ ಐಪಿಸಿ ಸೆಕ್ಷನ್ 307(ಕೊಲೆ ಯತ್ನ)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇವರೆಲ್ಲಾ ತಲೆಮರೆಸಿಕೊಂಡಿದ್ದರು.

Mangaluru: Anticipatory bail granted to five Hindu Leaders in heels of violence case

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಸತ್ಯಜಿತ್‌ ಸುರತ್ಕಲ್, ಭಜರಂಗದಳ ಪ್ರಾಂತ ಸಂಯೋಜಕ ಶರಣ್ ಪಂಪ್ ವೆಲ್, ಭಜರಂಗದಳದ ಮುಖಂಡ ಪ್ರದೀಪ್‌ ಪಂಪ್ ವೆಲ್, ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಪೂಂಜ ಹಾಗೂ ಭಜರಂಗದಳದ ದಕ್ಷಿಣ ಪ್ರಾಂತ ಗೋರಕ್ಷಾ ಪ್ರಮುಖ‌ ಮುರಳಿಕೃಷ್ಣ ಹಸಂತಡ್ಕ ರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕಾನೂನು ಬಾಹಿರವಾಗಿ ಗುಂಪು ಸೇರಿರುವುದು, ಗಲಭೆ ನಡೆಸಿರುವುದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು, ಶಾಂತಿಭಂಗ ಉಂಟುಮಾಡುವ ಉದ್ದೇಶದಿಂದ ನಿಂದನೆ ಮಾಡಿರುವುದು, ಅನುಚಿತ ವರ್ತನೆ, ಸರ್ಕಾರದ ಆದೇಶ ಉಲ್ಲಂಘನೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪಗಳಡಿ ಈ ಐವರು ಸೇರಿದಂತೆ ಸೇರಿದಂತೆ ಬಿಜೆಪಿ ಹಾಗೂ ಭಜರಂಗದಳದ 20ಕ್ಕೂ ಹೆಚ್ಚು ಜನರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+