ಮಂಗಳೂರು- ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ

ಮಂಗಳೂರು, ಅಕ್ಟೋಬರ್. 11: ಬೆಂಗಳೂರು -ಮಂಗಳೂರು ನಡುವೆ ಕೊನೆಗೂ ಸಂಚಾರ ಆರಂಭಗೊಂಡಿದೆ. ಬುಧವಾರ (ಅ.11)ಬೆಂಗಳೂರಿನಿಂದ ಮಂಗಳೂರು ಕಡೆಗೆ ರೈಲು ಸಂಚಾರ ಆರಂಭಿಸಿದೆ. ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆಯಲ್ಲಿ ಭೂಕುಸಿತ ಉಂಟಾಗಿತ್ತು.

ಇದರಿಂದ ರೈಲು ಸಂಚಾರ ಕಳೆದೆರಡು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಆದರೆ ರೈಲ್ವೆ ಇಲಾಖೆ ಸಮರೋಪಾಧಿಯಲ್ಲಿ ದುರಸ್ತಿ ಕಾರ್ಯ ನಡೆಸಿದ ಕಾರಣ ಒಂದುವರೆ ತಿಂಗಳ ಬಳಿಕ ಮತ್ತೆ ರೈಲು ಸಂಚಾರ ಅರಂಭವಾಗಿದೆ.

ಸಕಲೇಶಪುರ ಘಾಟಿ ಮಾರ್ಗದಲ್ಲಿ ಮಂಗಳೂರು-ಬೆಂಗಳೂರು ರೈಲು ಪುನಾರಂಭಗೊಂಡಿದ್ದು, ಕಾರವಾರ- ಕಣ್ಣೂರು -ಕೆಎಸ್ಆರ್ ಬೆಂಗಳೂರು ರೈಲು ಇಂದು ಗುರುವಾರ ಅ.11. ಸಂಚಾರ ಆರಂಭಿಸಲಿದೆ. ಇದೇ 12ರಿಂದ ಯಶವಂತಪುರ-ಕಾರವಾರ ಎಕ್ಸ್ ಪ್ರೆಸ್ ರೈಲು ಮುಂಜಾನೆ 7.10ಕ್ಕೆ ಯಶವಂತಪುರದಿಂದ ಹೊರಡಲಿದೆ.

Mangaluru-Bangaluru train service started

ಅದಕ್ಕೆ ಪರ್ಯಾಯವಾಗಿ ಅಕ್ಟೋಬರ್ 12ರಿಂದ ಕಾರವಾರದಿಂದ ರೈಲು ಬೆಂಗಳೂರಿಗೆ ಸಂಚರಿಸಲಿದೆ.

ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಅಕ್ಟೋಬರ್ 1ರಂದು ಭೂಕುಸಿತವಾದ ಕಡೆಗಳಲ್ಲಿ ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಸಿ, ಈ ಮಾರ್ಗದಲ್ಲಿ ಗೂಡ್ಸ್ ರೈಲು ಓಡಿಸಿ ಪರಿಕ್ಷೆ ನಡೆಸಿತ್ತು. ರೈಲು ಸಂಚಾರಕ್ಕೆ ಈ ಮಾರ್ಗ ಸುರಕ್ಷಿತವಾಗಿರುವ ವರದಿ ಹಿನ್ನೆಲೆಯಲ್ಲಿ ಈಗ ಮಂಗಳೂರು- ಬೆಂಗಳೂರು ನಡುವೆ ಪ್ರಯಾಣಿಕರ ರೈಲು ಸಂಚಾರಕ್ಕೆ ಅನುವುಮಾಡಿ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+