ಮಂಗಳೂರಿನ ಬಿಜೆಪಿ ಶಾಸಕನಿಗೆ ಕೊರೊನಾ ಸೋಂಕು ದೃಢ

ಮಂಗಳೂರು, ಜುಲೈ 2: ಮಂಗಳೂರಿನ ಬಿಜೆಪಿ ಶಾಸಕರೊಬ್ಬರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಅವರೇ ಸ್ವಯಂ ಪ್ರೇರಿತರಾಗಿ ಕೊರೊನಾ ಸೋಂಕಿನ ತಪಾಸಣೆಗೆ ಒಳಗಾದಾಗ ಸೋಂಕು ಇರುವುದು ದೃಢಪಟ್ಟಿದೆ.

Recommended Video

      Facebook brings a new Update to reduce sharing of Fake news | Oneindia Kannada

      ಈ ಶಾಸಕರು ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕಾರಣ ಸೋಂಕಿತರ ಸಂಪರ್ಕಕ್ಕೆ ಬಂದು ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಶಾಸಕರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

      ಜೊತೆಗೆ ಶಾಸಕರೇ ಟ್ವೀಟ್ ಮಾಡಿದ್ದು, "ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮ ಆಶೀರ್ವಾದದೊಂದಿಗೆ ಗುಣಮುಖನಾಗುತ್ತಿದ್ದೇನೆ. ಕೆಲವು ದಿನಗಳ ಕಾಲ ಚಿಕಿತ್ಸೆಯಲ್ಲಿರುತ್ತೇನೆ. ಹೊರಗೆ ಹೋದಾಗ ದಯವಿಟ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಆಗಾಗ ಕೈ ತೊಳೆದುಕೊಳ್ಳಿ. ದಯವಿಟ್ಟು ನಿಮ್ಮ ಬಗ್ಗೆ ಹಾಗೂ ನಿಮ್ಮ ಹತ್ತಿರದವರ ಬಗ್ಗೆ ಕಾಳಜಿ ವಹಿಸಿ" ಎಂದು ಮನವಿ ಮಾಡಿದ್ದಾರೆ.

      Mangaluru BJP MLA Tested Coronavirus Positive

      ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 90 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೊರೊನಾ ಉಸ್ತುವಾರಿ ವಹಿಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಧಿಕಾರಿಗೂ ಸೋಂಕು ಕಾಣಿಸಿಕೊಂಡಿದ್ದು, ಮಂಗಳೂರಿನಲ್ಲಿ ತೀವ್ರ ಆತಂಕ ಹುಟ್ಟಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+