Breaking : ಮಂಗಳೂರಿನಲ್ಲಿ ಸಂಚರಿಸುತ್ತಿದ್ದ ಆಟೋದಲ್ಲಿ ಸ್ಫೋಟ, ಇಬ್ಬರಿಗೆ ಗಾಯ

ಮಂಗಳೂರು, ನವೆಂಬರ್‌, 19: ಮಂಗಳೂರಿನಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟ ಸಂಭವಿಸಿದೆ. ನಗರದ ಕಂಕನಾಡಿ ಪೊಲೀಸ್ ಠಾಣೆಯ ಬಳಿಯ ನಾಗುರಿ ಎಂಬಲ್ಲಿ ಈ ಘಟನೆ ನಡೆದಿದೆ.
ನಾಗುರಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಸಂಭವಿಸಿದೆ. ಈ ಆಟೋದ ಒಳಗಡೆ ಛಿದ್ರಗೊಂಡ ಕುಕ್ಕರ್ ಪತ್ತೆಯಾಗಿದೆ. ಆಟೋದಲ್ಲಿದ್ದ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ‌ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಫೋಟವಾಗಿ ಆಟೋದಲ್ಲಿ ಬೆಂಕಿ‌ ಕಾಣಿಸಿಕೊಂಡಿದೆ. ಸ್ಫೋಟದಲ್ಲಿ ಪ್ರಯಾಣಿಕ ಹಾಗೂ ಆಟೋ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

Mangaluru; Blast in moving auto, Two injured

ಸದ್ಯ ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕ ಹಾಗೂ ಆಟೋ ಚಾಲಕನಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಮಾತನಾಡಿದ ಅವರು, ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಈ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ.‌ ಬ್ಲಾಸ್ಟ್ ಆಗಿರುವ ಬಗ್ಗೆ ಪ್ರತ್ಯೇಕ್ಷ ಸಾಕ್ಷಿಗಳು ಇನ್ನೂ ಸಿಕ್ಕಿಲ್ಲ. ವಿಧಿ ವಿಜ್ಞಾನ ಇಲಾಖೆಯ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನೀಡಿದ ಬಳಿಕ ಸ್ಫೋಟದ ಮಾಹಿತಿ ತಿಳಿಯಲಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+