ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಾಂಜಾ ಸಾಗಾಟ, ಮೂವರು ಮಂಗಳೂರು ಸಿಸಿಬಿ ಬಲೆಗೆ

|
Google Oneindia Kannada News

ಮಂಗಳೂರು, ಜುಲೈ 04 : ನಗರದಲ್ಲಿ ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಾಲು ಸಮೇತ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ನರಿಂಗಾನದ ನಿವಾಸಿ ರಮೀಝ್ ರಾಜ್ (24), ನಾಟೆಕಲ್ ನ ಮುಹಮ್ಮದ್ ಹನೀಫ್ (31) ಮತ್ತು ಬೆಳ್ಮದ ಇಕ್ಬಾಲ್ ಹಾರಿಸ್ (24) ಎಂದು ಗುರುತಿಸಲಾಗಿದೆ.

Mangaluru CCB Police Arrest 3 Ganja Peddlers, 10 Kg Ganja Seized

ಜುಲೈ 3ರಂದು ಅಂಧ್ರಪ್ರದೇಶದ ಚಿತ್ತೂರಿನಿಂದ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ತಂದು ಮಂಗಳೂರಿನ ಫಳ್ನೀರ್ ರಸ್ತೆಯ ಲಾಡ್ಜ್ ವೊಂದರಲ್ಲಿ ಕೊಠಡಿಯನ್ನು ಪಡೆದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.

ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ನಲ್ಲಿನ ವಸತಿಗೃಹದಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಬಂಧಿತರಿಂದ ಒಟ್ಟು 10 ಕೆಜಿ ಗಾಂಜಾ, 3 ಮೊಬೈಲ್ ಫೋನ್, ಡಿಜಿಟಲ್ ತೂಕದ ಯಂತ್ರ, ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್ ಗಳಾಗಿ ಮಾರಾಟ ಮಾಡಲು ಉಪಯೋಗಿಸುವ ಪ್ಲಾಸ್ಟಿಕ್ ಕವರ್ ಗಳು, 9,500 ರು. ನಗದು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

English summary
In a major haul, the city crime branch police (CCB) on Monday July 3 seized 10 kg of ganja and arrested three persons. The arrested are Rameez Raaz (24), a resident of Naringana, Bantwal, Mohammed Haneef (31), a resident of Natekal, and Iqbal Haris (24), a resident of Belma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X